ಪಿಎಫ್ಐ ಗೂ ಮುನ್ನ ಆರೆಸ್ಸೆಸ್ ಅನ್ನು ನಿಷೇಧಿಸಬೇಕಿತ್ತು: ಲಾಲು ಪ್ರಸಾದ್ ಯಾದವ್
ಪಾಟ್ನಾ, ಸೆ. 28: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ವನ್ನು ನಿಷೇಧಿಸುವ ಮುನ್ನ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ವನ್ನು ನಿಷೇಧಿಸಬೇಕಿತ್ತು ಎಂದು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಬುಧವಾರ ಹೇಳಿದ್ದಾರೆ.
‘‘ಪಿಎಫ್ಐನಂತೆ ದ್ವೇಷ ಹರಡುವ ಆರ್ಎಸ್ಎಸ್ ಸೇರಿದಂತೆ ಎಲ್ಲ ಸಂಘಟನೆಗಳಿಗೆ ನಿಷೇಧ ವಿಧಿಸಬೇಕು. ಮೊದಲು ಆರ್ಎಸ್ಎಸ್ ನಿಷೇಧಿಸಬೇಕು. ಅದು ಪಿಎಫ್ಐಗಿಂತ ಕೆಟ್ಟ ಸಂಘಟನೆ. ಆರ್ಎಸ್ಎಸ್ ಅನ್ನು ಎರಡು ಬಾರಿ ನಿಷೇಧಿಸಲಾಗಿತ್ತು. ಆರೆಸ್ಸೆಸ್ ಅನ್ನು ಉಕ್ಕಿನ ಮನುಷ್ಯ ಎಂದು ಕರೆಯಲಾಗುತ್ತಿದ್ದ ಸರ್ದಾರ್ ಪಟೇಲ್ ಅವರು ನಿಷೇಧಿಸಿದ್ದರು’’ ಎಂದು ಲಾಲು ಪ್ರಸಾದ್ ಯಾದವ್ ಅವರು ಟ್ವೀಟ್ ಮಾಡಿದ್ದಾರೆ.
Next Story