ಪುಲ್ವಾಮಾ: ಗೃಹ ಸಚಿವ ಅಮಿತ್ ಶಾ ಭೇಟಿಯ ಮುನ್ನಾದಿನ ಭಯೋತ್ಪಾದಕ ದಾಳಿ,ಓರ್ವ ಪೊಲೀಸ್ ಹುತಾತ್ಮ
ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿಗೆ ಗಾಯ
ಸಾಂದರ್ಭಿಕ ಚಿತ್ರ, Photo:NDTV
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ಪೊಲೀಸ್ ಹುತಾತ್ಮರಾಗಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ.
"ಪುಲ್ವಾಮಾದ ಪಿಂಗ್ಲಾನಾದಲ್ಲಿ ಸಿಆರ್ಪಿಎಫ್ ಹಾಗೂ ಪೊಲೀಸರ ಜಂಟಿ ನಾಕಾ ಪಾರ್ಟಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ಭಯೋತ್ಪಾದಕ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾದರು ಹಾಗೂ ಇನ್ನೋರ್ವ ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಮೂರು ದಿನಗಳ ಭೇಟಿಗಾಗಿ ನಾಳೆ ಜಮ್ಮು -ಕಾಶ್ಮೀರಕ್ಕೆ ಆಗಮಿಸಲಿದ್ದಾರೆ. ಶಾ ಅವರು ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುವುದರ ಜೊತೆಗೆ ರಾಜೌರಿ ಮತ್ತು ಬಾರಾಮುಲ್ಲಾ ಜಿಲ್ಲೆಯಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
#Terrorists fired upon joint naka party of CRPF & Police at Pinglana, #Pulwama. In this #terror attack, 01 Police personnel got #martyred & 01 CRPF personnel got injured. Reinforcement sent. Area being #cordoned. Further details shall follow.@JmuKmrPolice
— Kashmir Zone Police (@KashmirPolice) October 2, 2022