ಮುಕೇಶ್ ಅಂಬಾನಿ ನಿವಾಸ ಸ್ಫೋಟಿಸುವ ಬೆದರಿಕೆ: ಅರೋಪಿಯ ಬಂಧನ
ಮುಕೇಶ್ ಅಂಬಾನಿ (Photo:PTI)
ಮುಂಬೈ: ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಹಾಗೂ ಅವರ ಕುಟುಂಬವನ್ನು ಗುರಿಯಾಗಿಸಿಕೊಂಡು ಅನಾಮಧೇಯ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಬಿಹಾರದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.
ಬಿಹಾರದ ದರ್ಬಂಗಾ ಜಿಲ್ಲೆಯಿಂದ ಮಧ್ಯರಾತ್ರಿಯ ಸುಮಾರಿಗೆ ಪೊಲೀಸ್ ತಂಡವೊಂದು ಶಂಕಿತನನ್ನು ಬಂಧಿಸಿ ಮುಂಬೈಗೆ ಕರೆತರುತ್ತಿದೆ ಎಂದು ಅವರು ಹೇಳಿದರು.
ಮುಂಬೈನ ಸರ್ ಎಚ್ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬುಧವಾರ ಎರಡು ಕರೆಗಳು ಬಂದಿದ್ದು, ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ಕುಟುಂಬದ ನಿವಾಸ 'ಆಂಟಿಲಿಯಾ' ಜೊತೆಗೆ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಕರೆ ಮಾಡಿದಾತ ಬೆದರಿಕೆ ಹಾಕಿದ್ದಾನೆ.
ಕರೆ ಮಾಡಿದವನು ಕೈಗಾರಿಕೋದ್ಯಮಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story