Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಗುವಿಗೆ ಜನ್ಮ ನೀಡುವ ಕುರಿತು...

ಮಗುವಿಗೆ ಜನ್ಮ ನೀಡುವ ಕುರಿತು ಪತ್ನಿಯನ್ನು ಪತಿ ಬಲವಂತಪಡಿಸುವ ಹಾಗಿಲ್ಲ, ಅದು ಆಕೆಯ ಆಯ್ಕೆ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ7 Oct 2022 12:55 PM IST
share
ಮಗುವಿಗೆ ಜನ್ಮ ನೀಡುವ ಕುರಿತು ಪತ್ನಿಯನ್ನು ಪತಿ ಬಲವಂತಪಡಿಸುವ ಹಾಗಿಲ್ಲ, ಅದು ಆಕೆಯ ಆಯ್ಕೆ: ಹೈಕೋರ್ಟ್

ಮುಂಬೈ: ಮಗುವಿಗೆ ಜನ್ಮ ನೀಡುವ ಕುರಿತಂತೆ ಮಹಿಳೆಯೊಬ್ಬಳಿಗೆ ಬಲವಂತಪಡಿಸುವ ಹಾಗಿಲ್ಲ ಎಂದು ಬಾಂಬೆ ಹೈಕೋರ್ಟಿನ(Bombay High Court) ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಅತುಲ್ ಚಂದೂರ್ಕರ್ ಮತ್ತು ಊರ್ಮಿಳಾ ಜೋಷಿ ಪಾಲ್ಕೆ ಹೇಳಿದ್ದಾರೆ ಎಂದು livelaw.in ವರದಿ ಮಾಡಿದೆ.

ಮಹಿಳೆಯೊಬ್ಬಳು ತನ್ನ ಪತಿಯ ಅನುಮತಿಯಿಲ್ಲದೇ ಗರ್ಭಪಾತ ಮಾಡಿಸಿಕೊಂಡರೆ ಅದು ಹಿಂದು ವಿವಾಹ ಕಾಯಿದೆಯ ಅನುಸಾರ ಕ್ರೂರತೆ ಎಂದು ಪರಿಗಣಿಸಬಹುದೇ ಎಂಬ ಪ್ರಶ್ನೆಯನ್ನು ನ್ಯಾಯಾಲಯದ ಮುಂದಿರಿಸಲಾಗಿತ್ತು.

ಸಂತಾನೋತ್ಪತ್ತಿ ಕುರಿತಂತೆ ಮಹಿಳೆ ಹೊಂದಿರುವ ಆಯ್ಕೆಯು ಸಂವಿಧಾನದ 21ನೇ ವಿಧಿಯಲ್ಲಿ ಅಡಕವಾಗಿರುವ ಆಕೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ ಎಂದು ನ್ಯಾಯಾಲಯ ಹೇಳಿದೆಯಲ್ಲದೆ.

ಪತ್ನಿ ತನ್ನ ಅನುಮತಿಯಿಲ್ಲದೆ ಗರ್ಭಪಾತ ಮಾಡಿಸಿಕೊಂಡಿದ್ದಾಳೆಂದು ಹೇಳಿ ಈ ಕಾರಣಕ್ಕಾಗಿ ಹಿಂದು ವಿವಾಹ ಕಾಯಿದೆಯ ಸೆಕ್ಷನ್ 13(1)(ಐಎ) ಮತ್ತು 13(1)(ಐಬಿ) ಅನ್ವಯ ವಿಚ್ಛೇದನಕ್ಕಾಗಿ ವ್ಯಕ್ತಿಯೊಬ್ಬ ಅರ್ಜಿ ಸಲ್ಲಿಸಿದ್ದರೆ ಸಂತಾನೋತ್ಪತ್ತಿ ಕುರಿತಂತೆ ತನಗೆ ಆಯ್ಕೆಯ ಹಕ್ಕಿದೆ ಎಂಬ ಪತ್ನಿಯ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿದೆ.

ಈ ನಿರ್ದಿಷ್ಟ ಪ್ರಕರಣದಲ್ಲಿ 47 ವರ್ಷದ ವೃತ್ತಿಯಲ್ಲಿ ಶಿಕ್ಷಕನಾಗಿರುವ ಪತಿ, ತನ್ನಂತೆಯೇ ಶಿಕ್ಷಿಯಾಗಿರುವ ಪತ್ನಿಯ ಮೇಲೆ ಕ್ರೂರತೆ ಮತ್ತು ತನ್ನನ್ನು ತ್ಯಜಿಸಿದ ಆರೋಪ ಹೊರಿಸಿ ವಿಚ್ಛೇದನಕ್ಕೆ ಅರ್ಜೀ ಸಲ್ಲಿಸಿದ್ದ. 2001 ರಲ್ಲಿ ವಿವಾಹವಾದಂದಿನಿಂದ ಪತ್ನಿ ಉದ್ಯೋಗಕ್ಕೆ ಹೋಗುವುದನ್ನು ಮುಂದುವರಿಸಲು ಬಯಸಿದ್ದಳು ಹಾಗೂ ಎರಡನೇ ಬಾರಿ ಗರ್ಭವತಿಯಾದಾಗ ತನ್ನ ಅನುಮತಿಯಿಲ್ಲದೆ ಗರ್ಭಪಾತ ಮಾಡಿಸಿಕೊಂಡಿದ್ದು ತನ್ನ ಪಾಲಿಗೆ ಕ್ರೂರತೆಯಾಗಿದೆ. ಆಕೆ ತನ್ನ ಪುತ್ರನೊಂದಿಗೆ 2004 ರಲ್ಲಿ ತನ್ನನ್ನು ತ್ಯಜಿಸಿದ್ದಳು ಎಂದೂ ಆತ ಹೇಳಿದ್ದ.

ಪತ್ನಿ ತನ್ನ ವಕೀಲರ ಮೂಲಕ ವಾದ ಮಂಡನೆಯಲ್ಲಿ ತಾನು ಒಂದು ಮಗುವನ್ನು ಹೆತ್ತಿದ್ದಾಗಿ ಹಾಗೂ ಎರಡನೇ ಬಾರಿ ಗರ್ಭವತಿಯಾದಾಗ ಅನಾರೋಗ್ಯವಿಲ್ಲದೆ ಗರ್ಭಪಾತವಾಯಿತು ಹಾಗೂ ಪತಿ ತನ್ನನ್ನು ಮನೆಗೆ ವಾಪಸ್ ತರಲು ಅಥವಾ ಪುತ್ರನ ಖರ್ಚಿಗೆ ಹಣ ನೀಡಲು ಮುಂದೆ ಬಂದಿಲ್ಲ, ಪತಿಯ ಸಹೋದರಿಯರು ಸದಾ ತನ್ನ ಶೀಲ ಶಂಕಿಸುತ್ತಿದ್ದರು ಎಂದೂ ಆಕೆ ದೂರಿದ್ದಳು.

ಒಂದು ಪಕ್ಷ ಹೇಳಿದ ಮಾತ್ರಕ್ಕೆ ಅವರ ವಿವಾಹ ಮುರಿದು ಬಿದ್ದಿದೆ ಎಂದು ಹೇಳಲು ಸಾಧ್ಯವಿಲ್ಲ, ಮೇಲಾಗಿ ಮಹಿಳೆ ಅದಾಗಲೇ ಒಂದು ಮಗುವನ್ನು ಹೆತ್ತಿರುವುದರಿಂದ  ಹಾಗೂ ವ್ಯಕ್ತಿ ತನ್ನ ಪತ್ನಿಯ ಮೇಲೆ ಗರ್ಭಪಾತ ಕುರಿತಂತೆ ಮಾಡಿದ ಆರೋಪವನ್ನು ಒಪ್ಪಿಕೊಂಡರೂ ಅದನ್ನು ಕ್ರೂರತೆ ಎಂದು ಪರಿಗಣಿಸಲಾಗದು ಎಂದು ನ್ಯಾಯಾಲಯ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X