-

ಗರ್ಬಾ ಕಾರ್ಯಕ್ರಮಕ್ಕೆ ಅಡ್ಡಿ ಆರೋಪ

ಗುಜರಾತ್ ನಲ್ಲಿ ಯುವಕರನ್ನು ಸಾರ್ವಜನಿಕವಾಗಿ ಥಳಿಸಿದ್ದು ಸ್ಥಳೀಯ ಪೊಲೀಸರು: ವರದಿ

-

Photo: ndtv.com

ಅಹಮದಾಬಾದ್: ಈ ವಾರದ ಆರಂಭದಲ್ಲಿ ಗುಜರಾತ್ (Gujarat) ನಲ್ಲಿ ಖೇಡಾದಲ್ಲಿ ನವರಾತ್ರಿ ಗರ್ಬಾ (Navratri Garba) ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದವರು ಸ್ಥಳೀಯ ಪೊಲೀಸರು ಎಂದು ಗುಜರಾತ್ ಪೊಲೀಸ್ ಮೂಲಗಳು ತಿಳಿಸಿವೆ ಎಂದು ndtv.com ವರದಿ ಮಾಡಿದೆ.

ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ಯುವಕರನ್ನು ವಿದ್ಯುತ್ ಕಂಬಗಳಿಗೆ ಕಟ್ಟಿಹಾಕಿ ಲಾಠಿಗಳಿಂದ ಹೊಡೆಯುತ್ತಿದ್ದಾಗ ನೂರಾರು ಜನರ ಗುಂಪು ಚಪ್ಪಾಳೆ ತಟ್ಟಿ ಹರ್ಷೋದ್ಗಾರ ಮಾಡುತ್ತಿರುವ ವೀಡಿಯೊಗಳು ವೈರಲ್ ಆಗಿದ್ದವು.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋಗಳ ಬಗ್ಗೆ ಭಾರೀ ಆಕ್ರೋಶ ವ್ಯಕವಾಗಿರುವ ನಡುವೆ, ರಾಜ್ಯ ಪೊಲೀಸ್ ಮುಖ್ಯಸ್ಥ ಆಶಿಶ್ ಭಾಟಿಯಾ ನಿನ್ನೆ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದರು.

ಘಟನೆಯ ಕುರಿತು ತನಿಖೆ ನಡೆಸುತ್ತಿರುವ ಸಮಿತಿಯು ಮುಂದಿನ ಎರಡು ದಿನಗಳಲ್ಲಿ ತನ್ನ ವರದಿಯನ್ನು ಪೊಲೀಸರಿಗೆ ಸಲ್ಲಿಸಲಿದೆ. ವೀಡಿಯೊಗಳ ಸತ್ಯಾಸತ್ಯತೆ ದೃಢಪಟ್ಟ ನಂತರ ಆರೋಪಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ತೃಣಮೂಲ ಕಾಂಗ್ರೆಸ್ ದೂರು
ಗುಜರಾತ್ ಪೊಲೀಸರು ಮುಸ್ಲಿಂ ಯುವಕರ ಮೇಲೆ ಸಾರ್ವಜನಿಕವಾಗಿ ಥಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ತೃಣಮೂಲ  ಕಾಂಗ್ರೆಸ್ ದೂರು ನೀಡಿದೆ ಎಂದು ಪಕ್ಷದ ವಕ್ತಾರ ಸಾಕೇತ್ ಗೋಖಲೆ ಶುಕ್ರವಾರ ತಿಳಿಸಿದ್ದಾರೆ. 

ಎನ್ಎಚ್ಆರ್ಸಿ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ತನಿಖೆಗೆ ಪರಿಗಣಿಸದಿರುವುದು "ನಾಚಿಕೆಗೇಡಿನ ಸಂಗತಿ" ಎಂದು ಗೋಖಲೆ ಹೇಳಿದರು.

ಗುಜರಾತ್ ಪೊಲೀಸರು ಮುಸ್ಲಿಂ ಯುವಕರನ್ನು ಸಾರ್ವಜನಿಕವಾಗಿ ಥಳಿಸಿದ ವಿಷಯವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC)  ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಳ್ಳದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಆದರೆ "ಯಾರೂ ದೂರು ನೀಡಿಲ್ಲ" ಎಂದು ಭಾವಿಸಬಾರದು. ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಇಂದು ಎನ್ಎಚ್ಆರ್ಸಿಗೆ ದೂರು ಸಲ್ಲಿಸಿದೆ ಎಂದು ಗೋಖಲೆ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಗುವಿಗೆ ಜನ್ಮ ನೀಡುವ ಕುರಿತು ಪತ್ನಿಯನ್ನು ಪತಿ ಬಲವಂತಪಡಿಸುವ ಹಾಗಿಲ್ಲ, ಅದು ಆಕೆಯ ಆಯ್ಕೆ: ಹೈಕೋರ್ಟ್

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top