"ನಾವು ಪೊಲೀಸರನ್ನೇಕೆ ಸಂಶಯಿಸಬೇಕು?": ಶ್ರದ್ಧಾ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸುವುದಕ್ಕೆ ಕೋರ್ಟ್ ನಕಾರ
ಹೊಸದಿಲ್ಲಿ: ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣವನ್ನು ದಿಲ್ಲಿ ಪೊಲೀಸರಿಂದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ಇಂದು ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್ ಅವರ ವಿಭಾಗೀಯ ಪೀಠವು ದಿಲ್ಲಿ ಪೊಲೀಸರು ತನಿಖೆ ನಡೆಸುತ್ತಿದೆ ಮತ್ತು ನ್ಯಾಯಾಲಯವು ತನಿಖೆಯನ್ನು ಮೇಲ್ವಿಚಾರಣೆ ಮಾಡುವುದಿಲ್ಲ ಎಂದು ಹೇಳಿದೆ.
80 ರಷ್ಟು ತನಿಖೆ ಪೂರ್ಣಗೊಂಡಿದೆ ಎಂದು ದಿಲ್ಲಿ ಪೊಲೀಸರು ಹೈಕೋರ್ಟ್ಗೆ ತಿಳಿಸಿದ್ದಾರೆ. "80% ತನಿಖೆ ಪೂರ್ಣಗೊಂಡಿದೆ. ಹಿರಿಯ ಅಧಿಕಾರಿಗಳು ತನಿಖೆಯನ್ನು ನಿರ್ವಹಿಸುತ್ತಿದ್ದಾರೆ" ಎಂದು ದೆಹಲಿ ಪೊಲೀಸರು ಹೈಕೋರ್ಟ್ಗೆ ತಿಳಿಸಿದರು.
Next Story