Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊರ್ಬಿ ತೂಗುಸೇತುವೆ ಕುಸಿತ: ದುರಂತದ ದಿನ...

ಮೊರ್ಬಿ ತೂಗುಸೇತುವೆ ಕುಸಿತ: ದುರಂತದ ದಿನ 3,165 ಟಿಕೆಟ್ ಗಳನ್ನು ವಿತರಿಸಲಾಗಿತ್ತು: ವಿಧಿವಿಜ್ಞಾನ ವರದಿ

22 Nov 2022 10:38 PM IST
share
ಮೊರ್ಬಿ ತೂಗುಸೇತುವೆ ಕುಸಿತ: ದುರಂತದ ದಿನ 3,165 ಟಿಕೆಟ್ ಗಳನ್ನು  ವಿತರಿಸಲಾಗಿತ್ತು: ವಿಧಿವಿಜ್ಞಾನ ವರದಿ

ಮೊರ್ಬಿ (ಗುಜರಾತ),ನ.22: ಕಳೆದ ತಿಂಗಳು 140ಕ್ಕೂ ಅಧಿಕ ಜೀವಗಳನ್ನು ಬಲಿ ತೆಗೆದುಕೊಂಡ ಮೊರ್ಬಿ ತೂಗುಸೇತುವೆ(Morbi suspension bridge)ಕುಸಿತ ಕುರಿತು ತನಿಖೆಯು ಸೇತುವೆಯ ನವೀಕರಣ ಮತ್ತು ಪುನರಾರಂಭಗೊಂಡ ಬಳಿಕ ನಿರ್ವಹಣೆಯಲ್ಲಿ ಭಾರೀ ಲೋಪಗಳನ್ನು ಬೆಳಕಿಗೆ ತಂದಿದ್ದು,ಗುತ್ತಿಗೆದಾರ ಒರೆವಾ ಗ್ರೂಪ್(Orewa Group)ಮತ್ತು ಸ್ಥಳೀಯ ನಗರಸಭೆಯ ಕುರಿತು ಹಲವು ಪ್ರಶ್ನೆಗಳೆದ್ದಿವೆ.

ತೂಗು ಸೇತುವೆಯ ನಿರ್ವಹಣೆ,ಕಾರ್ಯಾಚರಣೆ ಮತ್ತು ಸುರಕ್ಷತೆಯ ಗುತ್ತಿಗೆಯನ್ನು ಪಡೆದಿದ್ದ ಒರೆವಾ ಗ್ರೂಪ್ ದುರಂತ ಸಂಭವಿಸಿದ ಅ.30ರಂದು 3,165ರಷ್ಟು ಅಗಾಧ ಸಂಖ್ಯೆಯಲ್ಲಿ ಟಿಕೆಟ್ ಗಳನ್ನು ವಿತರಿಸಿತ್ತು ಎಂದು ಮಂಗಳವಾರ ಜಿಲ್ಲಾ ನ್ಯಾಯಾಲಯದಲ್ಲಿ ವಿಧಿವಿಜ್ಞಾನ ತನಿಖಾ ವರದಿಯನ್ನು ಸಲ್ಲಿಸಿದ ಸಂದರ್ಭದಲ್ಲಿ ಸರಕಾರಿ ವಕೀಲರು ತಿಳಿಸಿದರು. ಎಲ್ಲ ಟಿಕೆಟ್ ಗಳನ್ನು ಮಾರಾಟ ಮಾಡಲಾಗಿರಲಿಲ್ಲ,ಆದರೆ ಯಾವುದೇ ಸಂದರ್ಭದಲ್ಲಿಯೂ ಕಂಪನಿಯು ಶತಮಾನದ ಹಿಂದೆ ನಿರ್ಮಾಣಗೊಂಡಿದ್ದ ಸೇತುವೆಯ ಭಾರವನ್ನು ಹೊರುವ ಸಾಮರ್ಥ್ಯದ ಮೌಲ್ಯಮಾಪನ ನಡೆಸಿರಲಿಲ್ಲ ಎಂದು ಅವರು ಹೇಳಿದರು.

ಸೇತುವೆಯ ಕೇಬಲ್ ಗಳು ತುಕ್ಕು ಹಿಡಿದಿದ್ದವು,ಅದರ ಆಧಾರ ಸ್ತಂಭಗಳು ಮುರಿದಿದ್ದವು,ಸ್ತಂಭಗಳಿಗೆ ಕೇಬಲ್ ಗಳನ್ನು ಜೋಡಿಸಿದ್ದ ಬೋಲ್ಟ್ ಗಳೂ ಸಡಿಲಾಗಿದ್ದವು ಎಂದು ವರದಿಯು ತಿಳಿಸಿದೆ. ಗುತ್ತಿಗೆದಾರರು ಅಳವಡಿಸಿದ್ದ ಹೊಸ,ಭಾರೀ ಗಾತ್ರದ ನೆಲಹಾಸಿನ ಹಲಗೆಗಳ ಭಾರವನ್ನು ತಡೆದುಕೊಳ್ಳಲು ಕೇಬಲ್ ಗಳಿಗೆ ಸಾಧ್ಯವಾಗಿರಲಿಲ್ಲ ಎನ್ನುವುದನ್ನು ಪ್ರಾಥಮಿಕ ತನಿಖೆಯು ಸೂಚಿಸಿತ್ತು.

ಒರೆವಾ ನಿಯೋಜಿಸಿದ್ದ ಕಾವಲುಗಾರರು ಮತ್ತು ಟಿಕೆಟ್ ಸಂಗ್ರಾಹಕ ದಿನಗೂಲಿ ಕಾರ್ಮಿಕರಾಗಿದ್ದು,ಅವರು ಗುಂಪು ನಿರ್ವಹಣೆಯಲ್ಲಿ ಪರಿಣತಿಯನ್ನು ಹೊಂದಿರಲಿಲ್ಲ ಎಂದು ಸರಕಾರಿ ವಕೀಲರು ಈವರೆಗೆ ಬಂಧಿತ ಒಂಭತ್ತು ಸಿಬ್ಬಂದಿಗಳ ಜಾಮೀನು ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ತಿಳಿಸಿದರು. ‘ಅಜಂತಾ’ ('Ajanta')ಗಡಿಯಾರಗಳಿಗಾಗಿ ಪ್ರಸಿದ್ಧವಾಗಿರುವ ಒರೆವಾದ ಉನ್ನತ ಆಡಳಿತ ಮಂಡಳಿಯ ಯಾರನ್ನೂ ಈವರೆಗೆ ಬಂಧಿಸಲಾಗಿಲ್ಲ.

ಸುರಕ್ಷತಾ ಶಿಷ್ಟಾಚಾರಗಳ ಬಗ್ಗೆ ಅಥವಾ ಸೇತುವೆಯ ಮೇಲೆ ಎಷ್ಟು ಜನರನ್ನು ಬಿಡಬೇಕು ಎನ್ನುವುದನ್ನು ಎಂದಿಗೂ ಕಾವಲುಗಾರರಿಗೆ ತಿಳಿಸಿರಲಾಗಿರಲಿಲ್ಲ ಎಂದು ವರದಿಯು ಹೇಳಿದೆ.

ಸುರಕ್ಷತೆಗೆ ಒರೆವಾ ಹೊಣೆಯಾಗಿತ್ತು. ಆದರೆ ಅದು ಅವಘಡದ ಸಂದರ್ಭದಲ್ಲಿ ಜನರನ್ನು ರಕ್ಷಿಸಲು ಜೀವರಕ್ಷರನ್ನು ಅಥವಾ ದೋಣಿಗಳನ್ನೂ ನಿಯೋಜಿಸಿರಲಿಲ್ಲ ಎಂದು ಜಿಲ್ಲಾ ಸರಕಾರಿ ವಕೀಲ ವಿಜಯ ಜಾನಿ ಸುದ್ದಿಸಂಸ್ಥೆಗೆ ತಿಳಿಸಿದರು.

share
Next Story
X