-

ಗುಜರಾತ್ ಚುನಾವಣೆ; 788 ಅಭ್ಯರ್ಥಿಗಳ ಪೈಕಿ ಪ್ರತಿ ಐವರಲ್ಲಿ ಒಬ್ಬರು ಅಪರಾಧ ಹಿನ್ನೆಲೆಯವರು:‌ ADR ವಿಶ್ಲೇಷಣೆ

-

ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆ (Gujarat assembly election)ಯ ಮೊದಲ ಹಂತದ ಮತದಾನ ನಡೆಯುವ 89 ಕ್ಷೇತ್ರಗಳಿಗೆ ಸ್ಪರ್ಧಿಸಿರುವ 788 ಅಭ್ಯರ್ಥಿಗಳ ಪೈಕಿ ಪ್ರತಿ ಐವರಲ್ಲಿ ಒಬ್ಬರು ಅಪರಾಧ ಹಿನ್ನೆಲೆಯವರು ಎಂಬ ಅಂಶ ಅಸೋಸಿಯೇಶನ್ ಆಫ್ ಡೆಮಾಕ್ರಟಿಕ್ ರೆಫಾರ್ಮ್ಸ್ (Association for Democratic Reforms-ADR) ನಡೆಸಿದ ವಿಶ್ಲೇಷಣೆಯಿಂದ ತಿಳಿದು ಬಂದಿದೆ ಎಂದು timesofindia.com ವರದಿ ಮಾಡಿದೆ.

ಮೊದಲ ಹಂತದ ಚುನಾವಣೆಗೆ ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಶೇಕಡ 21ರಷ್ಟು ಮಂದಿ ಅಪರಾಧ ದಾಖಲೆಗಳು ಇರುವವರು. 2017ರ ಚುನಾವಣೆಯಲ್ಲಿ ಈ ಪ್ರಮಾಣ ಶೇಕಡ 15ರಷ್ಟಾಗಿತ್ತು. ಆಸಕ್ತಿದಾಯಕ ಅಂಶವೆಂದರೆ ಗಂಭೀರ ಅಪರಾಧ ಆರೋಪಗಳನ್ನು ಎದುರಿಸುತ್ತಿರುವವರ ಪ್ರಮಾಣ 2017ರಲ್ಲಿ ಇದ್ದ ಶೇಕಡ 8 ರಿಂದ ಈ ಬಾರಿ ಶೇಕಡ 13ಕ್ಕೇರಿದೆ. ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವುದು, ಹಲ್ಲೆ, ಕೊಲೆ, ಅಪಹರಣ ಮತ್ತು ಅತ್ಯಾಚಾರದಂಥ ಪ್ರಕರಣಗಳು ಇದರಲ್ಲಿ ಸೇರಿವೆ ಎಂದು ADR ನಡೆಸಿದ ವಿಶ್ಲೇಷಣೆಯಿಂದ ತಿಳಿದು ಬಂದಿದೆ.

ರಾಜಕೀಯ ಪಕ್ಷಗಳ ಪೈಕಿ ಆಮ್ ಆದ್ಮಿ ಪಾರ್ಟಿ ಗರಿಷ್ಠ ಸಂಖ್ಯೆಯ ಅಪರಾಧ ಹಿನ್ನೆಲೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. 88 ಅಭ್ಯರ್ಥಿಗಳ ಪೈಕಿ ಶೇಕಡ 36ರಷ್ಟು ಮಂದಿ ಅಪರಾಧ ಹಿನ್ನೆಲೆ ಹೊಂದಿದ್ದರೆ ಶೇಕಡ 30ರಷ್ಟು ಮಂದಿ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಶೇಕಡ 35ರಷ್ಟು ಮಂದಿ ಅಪರಾಧ ಆರೋಪಿಗಳಾಗಿದ್ದು, ಶೇಕಡ 20ರಷ್ಟು ಮಂದಿ ಗಂಭೀರ ಆರೋಪ ಎದುರಿಸುತ್ತಿರುವವರು.

ಬಿಜೆಪಿಯ ಶೇಕಡ 16ರಷ್ಟು ಅಭ್ಯರ್ಥಿಗಳು ಅಪರಾಧ ಹಿನ್ನೆಲೆ ಹೊಂದಿರುವವರಾದರೆ, ಶೇಕಡ 12ರಷ್ಟು ಮಂದಿ ಗಂಭೀರ ಆರೋಪ ಎದುರಿಸುತ್ತಿದ್ದಾರೆ.

2017ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶೇಕಡ 36ರಷ್ಟು, ಬಿಜೆಪಿಯ ಶೇಕಡ 25ರಷ್ಟು ಮತ್ತು ಆಮ್ ಆದ್ಮಿ ಪಾರ್ಟಿಯ ಶೇಕಡ 11ರಷ್ಟು ಮಂದಿ ಅಪರಾಧ ಹಿನ್ನೆಲೆ ಹೊಂದಿದ್ದರು. ಈ ಬಗ್ಗೆ timesofindia.com ವರದಿ ಮಾಡಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top