ದಿಲ್ಲಿ: ಸೂಟ್ಕೇಸ್ನಲ್ಲಿ ಮಹಿಳೆಯ ಮೃತದೇಹ ಪತ್ತೆ
ಹೊಸದಿಲ್ಲಿ,ಡಿ.8: ದಿಲ್ಲಿಯ ಪಂಜಾಬಿ ಬಾಗ್ ಪ್ರದೇಶದಲ್ಲಿ ಬುಧವಾರ ಸಂಜೆ ಸೂಟ್ಕೇಸ್ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೂಟ್ಕೇಸ್ನಿಂದ ದುರ್ನಾತ ಬರುತ್ತಿದೆ ಎಂಬ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಚರಂಡಿಯಲ್ಲಿದ್ದ ಅದನ್ನು ಹೊರತೆಗೆದು ಪರಿಶೀಲಿಸಿದಾಗ ತೀವ್ರವಾಗಿ ಕೊಳೆತಿದ್ದ ಮಹಿಳೆಯ ಶವ ಪತ್ತೆಯಾಗಿತ್ತು.
ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಂಜಯ ಗಾಂಧಿ ಸ್ಮಾರಕ ಆಸ್ಪತ್ರೆಗೆ ಸಾಗಿಸಲಾಗಿದೆ. ಸುಮಾರು 28-30 ವರ್ಷ ಪ್ರಾಯದ ಮಹಿಳೆಯ ಗುರುತು ಈವರೆಗೆ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದರು.
Next Story