ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಮೌಲಾನಾ ಆಝಾದ್ ಫೆಲೋಶಿಪ್ ಸ್ಥಗಿತಗೊಳಿಸಲು ಕೇಂದ್ರ ನಿರ್ಧಾರ
ಹೊಸದಿಲ್ಲಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಮೌಲಾನಾ ಆಜಾದ್ ನ್ಯಾಷನಲ್ ಫೆಲೋಶಿಪ್ (MANF) ಅನ್ನು 2022-23 ರಿಂದ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಗುರುವಾರ ಲೋಕಸಭೆಯಲ್ಲಿ ತಮಿಳುನಾಡಿನ ಸಂಸದ ಪ್ರತಾಪನ್ ಅವರ ಪ್ರಶ್ನೆಗೆ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಉತ್ತರಿಸುತ್ತಾ ಈ ಮಾಹಿತಿ ಬಹಿರಂಗಪಡಿಸಿದ್ದಾರೆ.
“MANF ಯೋಜನೆಯನ್ನು ವಿಶ್ವವಿದ್ಯಾನಿಲಯ ಅನುದಾನ ಆಯೋಗ (UGC) ಜಾರಿಗೊಳಿಸುತ್ತದೆ. UGC ಒದಗಿಸಿದ ಮಾಹಿತಿಯ ಪ್ರಕಾರ, 2014-15 ಮತ್ತು 2021-22 ರ ನಡುವೆ 6,722 ಅಭ್ಯರ್ಥಿಗಳನ್ನು ಯೋಜನೆಯಡಿ ಆಯ್ಕೆ ಮಾಡಲಾಗಿದ್ದು, ₹ 738.85 ಕೋಟಿಗಳ ಫೆಲೋಶಿಪ್ಗಳನ್ನು ಅದೇ ಅವಧಿಯಲ್ಲಿ ವಿತರಿಸಲಾಗಿದೆ." ಎಂದು ಇರಾನಿ ತಿಳಿಸಿದ್ದಾರೆ.
"ಕೇಂದ್ರ ಸರ್ಕಾರ ಜಾರಿಗೊಳಿಸುವ ವಿವಿಧ ಫೆಲೋಶಿಪ್ಗಳಡಿಯಲ್ಲಿ ಅಲ್ಪಸಂಖ್ಯಾತರ ವಿಭಾಗಗಳ ವಿದ್ಯಾರ್ಥಿಗಳಿಗೂ ಅವಕಾಶವಿದೆ, ಹಾಗಾಗಿ MANF ಯೋಜನೆಯಡಿಯಲ್ಲಿ ಬರುವ ಫೆಲೋಶಿಪ್ ಗಳು 2022-23 ನೇ ಶೈಕ್ಷಣಿಕ ವರ್ಷದಿಂದ ಮುಂದುವರಿಯುವುದಿಲ್ಲ" ಎಂದು ಇರಾನಿ ತಿಳಿಸಿದ್ದಾರೆ.
ಇದನ್ನೂ ಓದಿ: ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಪ್ರಾಥಮಿಕ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ರದ್ದು: ಕೇಂದ್ರ