Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ:...

ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ: ಸಂತ್ರಸ್ತೆ ಗಂಭೀರ

14 Dec 2022 12:39 PM IST
share
ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ: ಸಂತ್ರಸ್ತೆ ಗಂಭೀರ

ಹೊಸದಿಲ್ಲಿ: ಇಂದು ನೈಋತ್ಯ ದಿಲ್ಲಿಯ ದ್ವಾರಕಾ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 17 ವರ್ಷದ ಶಾಲಾ ಬಾಲಕಿಯ ಮುಖಕ್ಕೆ ಆ್ಯಸಿಡ್  ಎರಚಿದ್ದರಿಂದ ವಿದ್ಯಾರ್ಥಿನಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾಳೆ ಎಂದು NDTV ವರದಿ ಮಾಡಿದೆ.

ಮಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿಸೆರೆಯಾಗಿರುವ ಘಟನೆಯ ಆಘಾತಕಾರಿ ದೃಶ್ಯಗಳಲ್ಲಿ ಇಬ್ಬರು ಹುಡುಗಿಯರು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಬೈಕ್ ನಲ್ಲಿ ನಿಧಾನವಾಗಿ ಬಂದ ಇಬ್ಬರು  ಸವಾರರಲ್ಲಿ ಒಬ್ಬಾತ  17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್  ಎಸೆದಿದ್ದಾನೆ. ನಂತರ ಬಾಲಕಿ ತೀವ್ರವಾದ ನೋವಿನಲ್ಲಿ ತನ್ನ ಮುಖವನ್ನು ಹಿಡಿದುಕೊಂಡು ಓಡುತ್ತಿರುವುದು  ಕಂಡುಬಂದಿದೆ.

"ನನ್ನ ಹೆಣ್ಣುಮಕ್ಕಳು, ಒಬ್ಬಳು 17 ವರ್ಷ ಹಾಗೂ  ಇನ್ನೊಬ್ಬಳು 13 ವರ್ಷ ಇಂದು ಬೆಳಿಗ್ಗೆ ಒಟ್ಟಿಗೆ ಶಾಲೆಗೆ ಹೋಗಿದ್ದರು. ಇದ್ದಕ್ಕಿದ್ದಂತೆ, ಬೈಕ್‌ನಲ್ಲಿ ಬಂದ ಇಬ್ಬರು ನನ್ನ ಹಿರಿಯ ಮಗಳ ಮೇಲೆ ಆ್ಯಸಿಡ್ ಎಸೆದು ಪರಾರಿಯಾದರು. ದುಷ್ಕರ್ಮಿಗಳು ತಮ್ಮ ಮುಖವನ್ನು ಮುಚ್ಚಿಕೊಂಡಿದ್ದರು" ಎಂದು ಬಾಲಕಿಯ ತಂದೆ ಹೇಳಿದರು.

ಬಾಲಕಿ, ಇಬ್ಬರ ಮೇಲೆ ಶಂಕೆ ವ್ಯಕ್ತಪಡಿಸಿದ್ದು, ಅವರಲ್ಲಿ ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ  ಹಿರಿಯ ಪೊಲೀಸ್ ಅಧಿಕಾರಿ ಎಂ. ಹರ್ಷವರ್ಧನ್ ತಿಳಿಸಿದ್ದಾರೆ.

देश की राजधानी में दिन दहाड़े एक स्कूली बच्ची पर 2 बदमाश दबंगई से तेज़ाब फेंककर निकल जाते हैं… क्या किसी को भी अब क़ानून का डर है ? क्यों तेज़ाब पर बैन नहीं लगाया जाता ? SHAME pic.twitter.com/kaWWQYey7A

— Swati Maliwal (@SwatiJaiHind) December 14, 2022
share
Next Story
X