ಪ್ರಿಯಕರನ ಎದುರೇ ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ; ಐವರು ಆರೋಪಿಗಳ ಬಂಧನ
ಚೆನ್ನೈ: ತಮಿಳುನಾಡಿನಲ್ಲಿ 20 ವರ್ಷದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನ ಎದುರೇ ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಸಂಜೆ ಕಾಂಚೀಪುರಂ ಜಿಲ್ಲೆಯಲ್ಲಿ ತನ್ನ ಪ್ರಿಯಕರನೊಂದಿಗೆ ಹೊರಗೆ ಹೋಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಲಾಗಿದೆ.
ಯುವತಿ ಹಾಗೂ ಆಕೆಯ ಪ್ರಿಯಕರ ಸಹಪಾಠಿಗಳಾಗಿದ್ದಾರೆ.
ಮಾಸ್ಕ್ ಧರಿಸಿದ್ದ ಇಬ್ಬರು ಕುಡುಕರು ಜೋಡಿಯನ್ನು ನೋಡಿದಾಗ ಮೊದಲು ವಿದ್ಯಾರ್ಥಿಯ ಮೇಲೆ ದಾಳಿ ಮಾಡಿದರು. ನಂತರ ಇತರ ನಾಲ್ವರು ಮುಸುಕುಧಾರಿ ವ್ಯಕ್ತಿಗಳೊಂದಿಗೆ ಸೇರಿಕೊಂಡು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಗ್ಯಾಂಗ್ ಯುವತಿಯನ್ನು ಚಾಕುವಿನಿಂದ ಬೆದರಿಸಿ ಕತ್ತಲೆ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಐವರನ್ನು ಬಂಧಿಸಲಾಗಿದ್ದು, ನಾಪತ್ತೆಯಾಗಿರುವ ಆರನೆಯವನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು NDTVಗೆ ತಿಳಿಸಿದ್ದಾರೆ.