Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆಂಗಳೂರು ಪ್ರಕರಣದ ಬೆನ್ನಲ್ಲೇ 35...

ಬೆಂಗಳೂರು ಪ್ರಕರಣದ ಬೆನ್ನಲ್ಲೇ 35 ಪ್ರಯಾಣಿಕರನ್ನು ಬಿಟ್ಟು ಸಿಂಗಾಪುರಕ್ಕೆ ಹಾರಿದ ಮತ್ತೊಂದು ವಿಮಾನ

19 Jan 2023 11:02 AM IST
share
ಬೆಂಗಳೂರು ಪ್ರಕರಣದ ಬೆನ್ನಲ್ಲೇ 35 ಪ್ರಯಾಣಿಕರನ್ನು ಬಿಟ್ಟು ಸಿಂಗಾಪುರಕ್ಕೆ ಹಾರಿದ ಮತ್ತೊಂದು ವಿಮಾನ

ಅಮೃತಸರ: ಅಮೃತಸರ ವಿಮಾನ ನಿಲ್ದಾಣದಲ್ಲಿ 35 ಪ್ರಯಾಣಿಕರನ್ನು ಬಿಟ್ಟು ಸಿಂಗಾಪುರಕ್ಕೆ ತೆರಳಿರುವ ವಿಮಾನವೊಂದು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಟೇಕ್ ಆಫ್ ಆಗಿದ್ದು ಹೇಗೆ ಎಂಬ ಬಗ್ಗೆ ತನಿಖೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಆದೇಶಿಸಿದೆ.

ಅಮೃತಸರ ವಿಮಾನ ನಿಲ್ದಾಣದಿಂದ ಬುಧವಾರ ಸಂಜೆ 7.55ಕ್ಕೆ ಹೊರಡಬೇಕಿದ್ದ ಸ್ಕೂಟ್ ಏರ್‌ಲೈನ್ ವಿಮಾನವು ಅದರ ನಿರ್ಗಮನ ಸಮಯಕ್ಕಿಂತ ಗಂಟೆಗಳ ಮೊದಲು ಮಧ್ಯಾಹ್ನ 3 ಗಂಟೆಗೆ ಟೇಕ್ ಆಫ್ ಆದ ನಂತರ ವಾಯುಯಾನ ನಿಯಂತ್ರಣ ಪ್ರಾಧಿಕಾರವು ತನಿಖೆಯನ್ನು ಆರಂಭಿಸಿತು.

ಸಿಂಗಾಪುರ ವಿಮಾನವನ್ನು ತಪ್ಪಿಸಿಕೊಂಡ  ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಗದ್ದಲ  ಉಂಟು ಮಾಡಿದರು ಹಾಗೂ  ಪ್ರತಿಭಟನೆಯನ್ನು ನಡೆಸಿದರು. ಅವರು ವಿಮಾನ ನಿಲ್ದಾಣದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ತಮ್ಮ ದೂರನ್ನು ದಾಖಲಿಸಿದ್ದಾರೆ.

ವಿಮಾನ ನಿಲ್ದಾಣದ ಅಧಿಕಾರಿಗಳು ವಿಮಾನಯಾನ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಪ್ರಯಾಣಿಕರಿಗೆ ಇ-ಮೇಲ್ ಮೂಲಕ ಹಾರಾಟದ ಸಮಯದಲ್ಲಿ ಬದಲಾವಣೆಯ ಬಗ್ಗೆ ತಿಳಿಸಲಾಗಿತ್ತು  ಎಂದು ಅವರು ಮಾಹಿತಿ ನೀಡಿದ್ದಾರೆ.

"ಸುಮಾರು 280 ಪ್ರಯಾಣಿಕರು ಸಿಂಗಾಪುರಕ್ಕೆ ಪ್ರಯಾಣಿಸಬೇಕಾಗಿತ್ತು. ಆದರೆ 253 ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು, ಇದರಿಂದಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರು ಉಳಿದಿದ್ದಾರೆ" ಎಂದು ಅಮೃತಸರ ವಿಮಾನ ನಿಲ್ದಾಣದ ನಿರ್ದೇಶಕ ANI ಗೆ ತಿಳಿಸಿದ್ದಾರೆ.

ಏರ್‌ಲೈನ್ಸ್ ಪ್ರಕಾರ, ಎಲ್ಲಾ ಪ್ರಯಾಣಿಕರಿಗೆ ಇಮೇಲ್ ಮೂಲಕ ಸಮಯದ ಬದಲಾವಣೆಯ ಬಗ್ಗೆ ತಿಳಿಸಲಾಗಿದೆ

ಒಂದು ಗುಂಪಿನಲ್ಲಿ 30 ಜನರಿಗೆ ಟಿಕೆಟ್‌ಗಳನ್ನು ಕಾಯ್ದಿರಿಸಿದ ಟ್ರಾವೆಲ್ ಏಜೆಂಟ್, ವಿಮಾನದ ಸಮಯದಲ್ಲಿ ಬದಲಾವಣೆಯ ಬಗ್ಗೆ ಅವರಿಗೆ (ಪ್ರಯಾಣಿಕರಿಗೆ) ತಿಳಿಸಲಿಲ್ಲ, ಇದರಿಂದಾಗಿ ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣಕ್ಕೆ ಬಂದ  ಪ್ರಯಾಣಿಕರೊಂದಿಗೆ ವಿಮಾನವು ಹಾರಾಟ ನಡೆಸಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ANI ಗೆ ತಿಳಿಸಿದ್ದಾರೆ.

ಇದೇ ರೀತಿಯ ಘಟನೆ ಇತ್ತೀಚೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ವರದಿಯಾಗಿತ್ತು. ಶಟಲ್ ಬಸ್ ಮೂಲಕ ವಿಮಾನಕ್ಕೆ ತೆರಳುತ್ತಿದ್ದ 55 ಪ್ರಯಾಣಿಕರನ್ನು ಬಿಟ್ಟು ದಿಲ್ಲಿಗೆ ಹೋಗುವ ಗೋ ಫಸ್ಟ್ ವಿಮಾನ ಟೇಕ್ ಆಫ್ ಆಗಿತ್ತು.

share
Next Story
X