Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಳ್ಳು ಸುದ್ದಿ ನಿರ್ಧರಿಸುವ ಹಕ್ಕು...

ಸುಳ್ಳು ಸುದ್ದಿ ನಿರ್ಧರಿಸುವ ಹಕ್ಕು ಸರ್ಕಾರದ್ದಾದರೆ, ಸುದ್ದಿಗಳು ಸೆನ್ಸಾರ್ ಆಗುವ ಅಪಾಯ: ಎಡಿಟರ್ಸ್‌ ಗಿಲ್ಡ್‌ ಕಳವಳ

19 Jan 2023 1:59 PM IST
share
ಸುಳ್ಳು ಸುದ್ದಿ ನಿರ್ಧರಿಸುವ ಹಕ್ಕು ಸರ್ಕಾರದ್ದಾದರೆ, ಸುದ್ದಿಗಳು ಸೆನ್ಸಾರ್ ಆಗುವ ಅಪಾಯ: ಎಡಿಟರ್ಸ್‌ ಗಿಲ್ಡ್‌ ಕಳವಳ

ಹೊಸದಿಲ್ಲಿ: ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಿದ್ದಪಡಿಸಿರುವ ಮಾಹಿತಿ ತಂತ್ರಜ್ಞಾನ ನಿಯಮಗಳ ತಿದ್ದುಪಡಿ ಕರಡು ಕುರಿತು ಬುಧವಾರ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತೀಯ ಸಂಪಾದಕರ ಒಕ್ಕೂಟವು (Editors Guild of India), ಸುಳ್ಳು ಸುದ್ದಿಯನ್ನು ನಿರ್ಧರಿಸುವ ಹಕ್ಕು ಸರ್ಕಾರದ ಏಕಸ್ವಾಮ್ಯಕ್ಕೊಳಪಟ್ಟರೆ, ಅದರಿಂದ ಸುದ್ದಿಗಳು ಸೆನ್ಸಾರ್‌ಗೆ ಒಳಗಾಗಬಹುದಾದ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ಸಂಪಾದಕರ ಒಕ್ಕೂಟವು, ಪತ್ರಿಕಾ ಮಾಹಿತಿ ದಳವು ಸುಳ್ಳು ಸುದ್ದಿ ಎಂದು ನಿರ್ಧರಿಸುವ ಸುದ್ದಿ ಲೇಖನಗಳನ್ನು ಸಾಮಾಜಿಕ ಮಾಧ್ಯಮ ಸಂಸ್ಥೆಗಳು ತೆಗೆದು ಹಾಕಬೇಕು ಎಂಬ ನಿಯಮವನ್ನು ಕೈಬಿಡಬೇಕು ಎಂದು ಆಗ್ರಹಿಸಿದೆ.

ಇದರೊಂದಿಗೆ ಪ್ರಸ್ತಾವಿತ ತಿದ್ದುಪಡಿ ಕರಡನ್ನೂ ಕೈಬಿಡುವಂತೆ ಆಗ್ರಹಿಸಿರುವ ಭಾರತೀಯ ಸಂಪಾದಕರ ಒಕ್ಕೂಟವು, "ಪತ್ರಿಕಾ ಸ್ವಾತಂತ್ರ್ಯವನ್ನು ಹೂತು ಹಾಕದಿರಲು ಡಿಜಿಟಲ್ ಮಾಧ್ಯಮಕ್ಕೆ ಶಾಸನ ರೂಪಿಸುವ ಮುನ್ನ ಪತ್ರಿಕಾ ಸಂಸ್ಥೆಗಳು, ಮಾಧ್ಯಮ ಸಂಘಟನೆಗಳು ಮತ್ತು ಇನ್ನಿತರ ಪಾಲುದಾರರೊಂದಿಗೆ ಅರ್ಥಪೂರ್ಣ ಸಮಾಲೋಚನೆ ನಡೆಸಬೇಕು" ಎಂದು ಸಲಹೆ ನೀಡಿದೆ.

ಈ ಸಂಬಂಧ ಹಲವಾರು ಕಾಯ್ದೆಗಳು ಅಸ್ತಿತ್ವದಲ್ಲಿದ್ದು, ವಾಸ್ತವವಾಗಿ ಇದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪಿಸಿರುವ ಭಾರತೀಯ ಸಂಪಾದಕರ ಒಕ್ಕೂಟ, ಈ ಹೊಸ ನೀತಿಯು ಮೂಲಭೂತವಾಗಿ ಮುಕ್ತ ಪತ್ರಿಕೋದ್ಯಮವನ್ನು ಸುಲಭವಾಗಿ ಹತ್ತಿಕ್ಕಲು ಅವಕಾಶ ನೀಡುತ್ತದೆ. ಇದರೊಂದಿಗೆ ಭಾರತೀಯ ಪತ್ರಿಕಾ ದಳ ಅಥವಾ ವಾಸ್ತವ ಪರಿಶೀಲಿಸಲು ಸರ್ಕಾರದಿಂದ ಮಾನ್ಯತೆ ಪಡೆದಿರುವ ಇನ್ನಾವುದೇ ಸಂಸ್ಥೆಯು ಸರ್ಕಾರಕ್ಕೆ ಸಮಸ್ಯಾತ್ಮಕವಾದ ಸುದ್ದಿಗಳನ್ನು ತೆಗೆಯುವಂತೆ ಅಂತರ್ಜಾಲ ಮಧ್ಯಸ್ಥ ಸಂಸ್ಥೆಗಳ ಮೇಲೆ ಒತ್ತಡ ಹೇರಲು ಸಾಧ್ಯವಾಗಲಿದೆ ಎಂದೂ ಕಳವಳ ವ್ಯಕ್ತಪಡಿಸಿದೆ.

ಈ ಮುನ್ನ ಸಾರ್ವಜನಿಕ ಸಮಾಲೋಚನೆಗಾಗಿ ಬಿಡುಗಡೆ ಮಾಡಲಾಗಿದ್ದ ಮಾಹಿತಿ ತಂತ್ರಜ್ಞಾನ (ಮಧ್ಯಸ್ಥಿಕೆ ಮಾರ್ಗಸೂಚಿಗಳು ಹಾಗೂ ಡಿಜಿಟಲ್ ಮಾಧ್ಯಮಗಳ ನೀತಿ ಸಂಹಿತೆ) ನಿಯಮಗಳು, 2021ರ ಕರಡನ್ನು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮಂಗಳವಾರ ಬಿಡುಗಡೆ ಮಾಡಿತ್ತು.

share
Next Story
X