Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2002ರ ಗುಜರಾತ್ ಗಲಭೆಯಲ್ಲಿ 17 ಮಂದಿ...

2002ರ ಗುಜರಾತ್ ಗಲಭೆಯಲ್ಲಿ 17 ಮಂದಿ ಅಲ್ಪಸಂಖ್ಯಾತರ ಹತ್ಯೆ: 22 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

25 Jan 2023 11:29 AM IST
share
2002ರ ಗುಜರಾತ್ ಗಲಭೆಯಲ್ಲಿ 17 ಮಂದಿ ಅಲ್ಪಸಂಖ್ಯಾತರ ಹತ್ಯೆ: 22 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ವಡೋದರ: ಗುಜರಾತ್‌ನ ಪಂಚಮಹಲ್ ಜಿಲ್ಲೆಯ ದೆಲ್ವೋಲ್ ಗ್ರಾಮದಲ್ಲಿ ಗೋದ್ರಾ ಘಟನೆಯ ಬಳಿಕ ನಡೆದ ಹಿಂಸಾಚಾರದಲ್ಲಿ 17 ಮಂದಿ ಅಲ್ಪಸಂಖ್ಯಾತರನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದ 22 ಆರೋಪಿಗಳನ್ನು ಹಲೋಲ್ ಹೆಚ್ಚುವರಿ ಸತ್ರ ನ್ಯಾಯಾಲಯ ಮಂಗಳವಾರ ಖುಲಾಸೆ ಮಾಡಿದೆ.

18 ವರ್ಷಗಳಿಂದ ವಿಚಾರಣಾಧೀನ ಕೈದಿಗಳಾಗಿದ್ದ ಎಂಟು ಮಂದಿ ವಿಚಾರಣೆ ವೇಳೆ ಮೃತಪಟ್ಟಿದ್ದರು. ಮೃತಪಟ್ಟವರ ಎಲುಬುಗಳು ಸೇರಿದಂತೆ ಎಲ್ಲ ಪುರಾವೆಗಳನ್ನು ನ್ಯಾಯಾಲಯ ಪರಿಶೀಲನೆ ನಡೆಸಿದೆ. ಆದರೆ ವಿಧಿವಿಜ್ಞಾನ ಪರೀಕ್ಷೆಯಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಇಲ್ಲ" ಎಂದು ಆರೋಪಿಗಳ ಪರ ವಕೀಲ ಗೋಪಾಲ್‌ಸಿಂಗ್ ಸೋಲಂಕಿ ಹೇಳಿದ್ದಾರೆ.

ಇದರ ಜತೆಗೆ ಸುಮಾರಉ 100 ಮಂದಿ ಸಾಕ್ಷಿಗಳನ್ನು ಪರಿಶೀಲನೆ ಮಾಡಲಾಗಿದ್ದು, ಇವರು ಕೂಡಾ ಮೂಲ ಹೇಳಿಕೆಯಿಂದ ವ್ಯತಿರಿಕ್ತವಾದ ಹೇಳಿಕೆ ನೀಡಿದ್ದಾರೆ.

2002ರಲ್ಲಿ 59 ಮಂದಿಯ ಸಾವಿಗೆ ಕಾರಣವಾದ ಸಾಬರಮತಿ ಎಕ್ಸ್‌ಪ್ರೆಸ್ ರೈಲಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಬಳಿಕ ಭಾರಿ ಪ್ರಮಾಣದ ಕೋಮುಗಲಭೆಗಳು ಸಂಭವಿಸಿದ್ದವು. ಘಟನೆಯ ಮರುದಿನ ಅಂದರೆ ಮಾರ್ಚ್ 1ರಂದು ಗೋದ್ರಾದಿಂದ 30 ಕಿಲೋಮೀಟರ್ ದೂರದ ಕಲೋಲ್ ಪಟ್ಟಣದ ದೆಲ್ವೋನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಇದರಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 17 ಮಂದಿ ಜೀವಂತ ದಹನವಾಗಿದ್ದರು.

ಘಟನೆಯಲ್ಲಿ ಸಂತ್ರಸ್ತರು ಮತ್ತು ಪ್ರತ್ಯಕ್ಷ ಸಾಕ್ಷಿಗಳು ಮನವಿ ಸಲ್ಲಿಸಿದರೂ ಪೊಲೀಸ್ ಅಧಿಕಾರಿಯೊಬ್ಬರು ಎಫ್‌ಐಆರ್ ದಾಖಲಿಸಿಲ್ಲ ಎಂಬ ಆರೋಪವೂ ಸೇರಿದಂತೆ ಎಲ್ಲ ಆರೋಪಗಳ ಬಗ್ಗೆ ತನಿಖೆ ನಡೆದಿತ್ತು. 2003ರ ಡಿಸೆಂಬರ್‌ನಲ್ಲಿ ಅಂದರೆ ಘಟನೆ ನಡೆದ 20 ತಿಂಗಳ ಬಳಿಕ ಮರು ವಿಚಾರಣೆಗೆ ಆದೇಶಿಸಲಾಗಿತ್ತು. ತಲೆ ಮರೆಸಿಕೊಂಡಿದ್ದ ಎಲ್ಲ ಆರೋಪಿಗಳನ್ನು 2004ರಲ್ಲಿ ಬಂಧಿಸಲಾಗಿದ್ದು, ಅವರ ಜಾಮೀನು ಅರ್ಜಿಗಳನ್ನು ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿತ್ತು. 2004ರಲ್ಲಿ ಅವರಿಗೆ ಗುಜರಾತ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು ಎಂದು ಸೋಲಂಕಿ ವಿವರಿಸಿದ್ದಾರೆ.

share
Next Story
X