ವಿಶ್ವವಿಖ್ಯಾತ 'ನಾಟುನಾಟು' ಹಾಡಿನ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿಗೆ ಪದ್ಮ ಪ್ರಶಸ್ತಿ
ಹೊಸದಿಲ್ಲಿ: ಗಣರಾಜ್ಯೋತ್ಸವದ ಮುನ್ನಾದಿನ ಕೇಂದ್ರ ಸರ್ಕಾರವು ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ದೇಶದ ವಿವಿಧ ಕ್ಷೇತ್ರದ ಹಲವು ಗಣ್ಯರು ಈ ಪದ್ಮ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಇತ್ತೀಚೆಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದಿರುವ ಆರ್ಆರ್ಆರ್(RRR) ಚಿತ್ರದ ನಾಟು ನಾಟು ಗೀತೆಯ ಸಂಗೀತ ನಿರ್ದೇಶಕ ಎಂಎಂ ಕೀರವಾಣ(M. M. Keeravani) ಈ ಬಾರಿಯ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಂಗೀತ ಮತ್ತು ಕಲಾ ಕ್ಷೇತ್ರದಲ್ಲಿನ ಅತ್ಯುತ್ತಮ ಕೊಡುಗೆಗಾಗಿ ಪದ್ಮ ಪ್ರಶಸ್ತಿಯನ್ನು ಕೀರವಾಣಿಯವರಿಗೆ ನೀಡಿ ಗೌರವಿಸಲಾಗಿದೆ.
ಕೀರವಾಣಿ ಸೇರಿದಂತೆ ಒಟ್ಟು 91 ವ್ಯಕ್ತಿಗಳು ಪದ್ಮಶ್ರೀ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.
6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. 106 ಪದ್ಮ ಪ್ರಶಸ್ತಿಗಳ ಪ್ರದಾನಕ್ಕೆ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ
Next Story