ಕೇರಳ: ಕಾರಿಗೆ ಬೆಂಕಿಹೊತ್ತಿಕೊಂಡು ದಂಪತಿ ಮೃತ್ಯು
ಕಣ್ಣೂರು (ಕೇರಳ): ಕೇರಳದ ಕಣ್ಣೂರಿನ ಜಿಲ್ಲಾ ಸರಕಾರಿ ಆಸ್ಪತ್ರೆ ಬಳಿ ಗುರುವಾರ ದಂಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದು, ಕಾರಿಗೆ ಬೆಂಕಿ ಹೊತ್ತಿಕೊಂಡ ನಂತರ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ನಾಲ್ವರು ಪಾರಾಗಿದ್ದಾರೆ. ಸಹ ಪ್ರಯಾಣಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಜಿಲ್ಲೆಯ ಕುಟ್ಯತ್ತೂರಿನವರಾದ 35 ಹಾಗೂ 26 ವರ್ಷ ವಯಸ್ಸಿನ ಸಂತ್ರಸ್ತರು ಹಾಗೂ ಇತರರು ಜಿಲ್ಲಾ ಆಸ್ಪತ್ರೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸ್ಥಳೀಯರ ಪ್ರಕಾರ, ಮೃತಪಟ್ಟ ಮಹಿಳೆ ಗರ್ಭಿಣಿಯಾಗಿದ್ದು, ಕಾರಿನ ಮುಂಭಾಗದ ಬಾಗಿಲು ತೆರೆದು ಸಂತ್ರಸ್ತ ದಂಪತಿಯನ್ನು ರಕ್ಷಿಸಲು ಪ್ರಯತ್ನಿಸಿದರೂ ಅದು ವಿಫಲವಾಗಿದೆ.
Next Story