ಗುಜರಾತ್ ನ ರಾಜ್ಕೋಟ್ ನಲ್ಲಿ 4.3 ತೀವ್ರತೆಯ ಭೂಕಂಪ
ರಾಜ್ಕೋಟ್: ರವಿವಾರ ಮಧ್ಯಾಹ್ನ ಗುಜರಾತ್ನ ರಾಜ್ಕೋಟ್ ಜಿಲ್ಲೆಯಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಮಧ್ಯಾಹ್ನ 3:21ರ ಸುಮಾರಿಗೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ ಮತ್ತು ಇನ್ನಿತರ ಮಾಹಿತಿಗಳನ್ನು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವಿಟರ್ ನಲ್ಲಿ ಪ್ರಕಟಿಸಿದೆ.
ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Next Story