Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಕಾರ್ಖಾನೆಯ ಉದ್ಯೋಗಿಗಳಿಗೆ 12 ಗಂಟೆ...

ʼಕಾರ್ಖಾನೆಯ ಉದ್ಯೋಗಿಗಳಿಗೆ 12 ಗಂಟೆ ಕೆಲಸʼ ಮಸೂದೆಯನ್ನು ಅಮಾನತ್ತಿನಲ್ಲಿರಿಸಿದ ತಮಿಳುನಾಡು ಸರ್ಕಾರ

25 April 2023 3:15 PM IST
share
ʼಕಾರ್ಖಾನೆಯ ಉದ್ಯೋಗಿಗಳಿಗೆ 12 ಗಂಟೆ ಕೆಲಸʼ ಮಸೂದೆಯನ್ನು ಅಮಾನತ್ತಿನಲ್ಲಿರಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಕಳೆದ ವಾರ ತಮಿಳುನಾಡು ವಿಧಾನಸಭೆಯಲ್ಲಿ ಕಾರ್ಖಾನೆಗಳಲ್ಲಿ ನಿಗದಿಗೊಳಿಸಲಾಗಿರುವ ಕಡ್ಡಾಯ 8 ಗಂಟೆ ದುಡಿಮೆ ಅವಧಿಯ ಬದಲು 12 ಗಂಟೆ ಅವಧಿಯ ದುಡಿಮೆಗೆ ಅವಕಾಶ ಮಾಡಿಕೊಡುವ ಮಸೂದೆಗೆ ವಿರೋಧ ಪಕ್ಷಗಳು ಹಾಗೂ ಕಾರ್ಮಿಕ ಸಂಘಟನೆಗಳಿಂದ ತೀವ್ರ ಪ್ರತಿಭಟನೆ ಎದುರಾದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಆ ಮಸೂದೆಯನ್ನು ಅಮಾನತ್ತಿನಲ್ಲಿರಿಸಿದೆ ಎಂದು livemint.com ವರದಿ ಮಾಡಿದೆ.

ಎಪ್ರಿಲ್ 21ರಂದು ಅನುಮೋದನೆಗೊಂಡ ಮಸೂದೆಗೆ ಹಲವಾರು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಹಾಗೂ ವಿರೋಧ ಪಕ್ಷಗಳು ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಆಧರಿಸಿ ಮಸೂದೆಯ ಜಾರಿಯನ್ನು ಅಮಾನತ್ತಿನಲ್ಲಿರಿಸಲಾಗಿದೆ ಎಂದು ಮುಖ್ಯಮಂತ್ರಿ ಎಂ.ಕೆ‌.ಸ್ಟಾಲಿನ್ ಹೇಳಿದ್ದಾರೆ.

ಕಳೆದ ವಾರ ತಮಿಳುನಾಡು ಸರ್ಕಾರ ಈ ಮಸೂದೆಗೆ ಅನುಮೋದನೆ ನೀಡಿತಾದರೂ, ಅದಿನ್ನೂ ಕಾಯ್ದೆಯಾಗಬೇಕಿದೆ.

ಎಪ್ರಿಲ್ 21ರಂದು ರಾಜ್ಯಾದ್ಯಂತ ಕಾರ್ಮಿಕರಿಗೆ ಅನುಕೂಲಕರ ದುಡಿಮೆ ಅವಧಿಯನ್ನು ಒದಗಿಸುವ ಕಾರ್ಖಾನೆಗಳು(ತಿದ್ದುಪಡಿ) ಕಾಯ್ದೆ, 2023ಕ್ಕೆ ತಮಿಳುನಾಡು ವಿಧಾನಸಭೆ ಅನುಮೋದನೆ ನೀಡಿತ್ತು. ಈ ನಡೆಯಿಂದ ರಾಜ್ಯದ ಉತ್ಪಾದನಾ ಸಾಮರ್ಥ್ಯ ವೃದ್ಧಿಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಈಗಾಗಲೇ ಆ್ಯಪಲ್ ಪೂರೈಕೆದಾರ ಫಾಕ್ಸ್‌ಕಾನ್ ಹಾಗೂ ಪೆಗಾಟ್ರಾನ್ ಅಲ್ಲದೆ ನೈಕ್ ಪಾದರಕ್ಷೆ ತಯಾರಿಕಾ ಕಂಪನಿಯಿಂದ ತಮಿಳುನಾಡು ಸರ್ಕಾರ ಕೋಟ್ಯಂತರ ರೂಪಾಯಿ ಬಂಡವಾಳವನ್ನು ಆಕರ್ಷಿಸಿದೆ.

ಶುಕ್ರವಾರ ವಿಧಾನಸಭೆಯಲ್ಲಿ ನಡೆದ ಚರ್ಚೆಯು ಕಾರ್ಮಿಕ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳ ಪ್ರತಿಭಟನೆಗೆ ಗುರಿಯಾಯಿತು. ಈ ತಿದ್ದುಪಡಿಯಿಂದ ಕಡ್ಡಾಯ ದುಡಿಮೆಯ ಅವಧಿ 8 ಗಂಟೆಯಿಂದ 12 ಗಂಟೆಗೆ ವಿಸ್ತರಣೆಯಾಗಲಿದೆ ಎಂದು ಅವು ಪ್ರತಿಪಾದಿಸಿದವು‌.

ಶುಕ್ರವಾರ ವಿಧಾನಸಭೆಯಲ್ಲಿ ಈ ಮಸೂದೆಯನ್ನು ಚರ್ಚೆಗೆತ್ತಿಕೊಂಡಾಗ ಆಡಳಿತಾರೂಢ ಡಿಎಂಕೆಯ ಮೈತ್ರಿ ಪಕ್ಷಗಳು ಸಭಾತ್ಯಾಗ ನಡೆಸಿದ್ದವು. ಅವುಗಳಲ್ಲಿ ಕಾಂಗ್ರೆಸ್, ಎಡಪಕ್ಷಗಳು ಹಾಗೂ ವಿಡುದಲೈ ಚಿರುತಾಯ್ಗಳ್ ಕಚ್ಚಿ ಪಕ್ಷ ಸೇರಿದ್ದವು.

ಹೀಗಿದ್ದೂ ವಿಧಾನಸಭೆಯಲ್ಲಿ ಆಡಳಿತಾರೂಢ ಡಿಎಂಕೆ ಬಹುಮತ ಹೊಂದಿರುವುದರಿಂದ ಮಸೂದೆಯು ಸದನದಲ್ಲಿ ಅಂಗೀಕಾರಗೊಂಡಿತ್ತು.

share
Next Story
X