Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹಣೆ...

ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹಣೆ ಮಾಡದಂತೆ ನಿರ್ದೇಶನ ನೀಡಬೇಕು: ಅಮಿತ್ ಶಾಗೆ ಸ್ಟಾಲಿನ್ ಒತ್ತಾಯ

25 May 2023 3:29 PM IST
share
ತಮಿಳುನಾಡಿನಲ್ಲಿ ಅಮುಲ್ ಹಾಲು ಸಂಗ್ರಹಣೆ ಮಾಡದಂತೆ ನಿರ್ದೇಶನ ನೀಡಬೇಕು: ಅಮಿತ್ ಶಾಗೆ ಸ್ಟಾಲಿನ್ ಒತ್ತಾಯ

ಚೆನ್ನೈ: ಗುಜರಾತ್ ಮೂಲದ ಡೈರಿ ಅಮುಲ್‌ಗೆ ದಕ್ಷಿಣ ರಾಜ್ಯದಲ್ಲಿ ಹಾಲು ಸಂಗ್ರಹಣೆ ಮಾಡದಂತೆ ತಕ್ಷಣದಿಂದ ಜಾರಿಗೆ ಬರುವಂತೆ ನಿರ್ದೇಶನ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ಒತ್ತಾಯಿಸಿದ್ದಾರೆ.

ಶಾ  ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ತಮಿಳುನಾಡು ಹಾಲಿನ ಶೆಡ್ ಪ್ರದೇಶದಲ್ಲಿ ಕೈರಾ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಅಮುಲ್) ಹಾಲು ಸಂಗ್ರಹಣೆಯಿಂದ ಉದ್ಭವಿಸುವ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದರು.

ಇತ್ತೀಚಿಗೆ ಅಮುಲ್ ತನ್ನ ಬಹು-ರಾಜ್ಯ ಸಹಕಾರಿ ಪರವಾನಗಿಯನ್ನು ಕೃಷ್ಣಗಿರಿ ಜಿಲ್ಲೆಯಲ್ಲಿ ಶೀತಲೀಕರಣ ಕೇಂದ್ರಗಳು ಹಾಗೂ  ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಬಳಸಿಕೊಂಡಿರುವುದು ರಾಜ್ಯ ಸರಕಾರದ ಗಮನಕ್ಕೆ ಬಂದಿದೆ ಎಂದು  ಸ್ಟಾಲಿನ್ ಹೇಳಿದರು.

ಅಲ್ಲದೆ, ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್, ಕಾಂಚೀಪುರಂ ಹಾಗೂ  ತಿರುವಳ್ಳೂರು ಜಿಲ್ಲೆಗಳಲ್ಲಿ ಎಫ್‌ಪಿಒಗಳು ಹಾಗೂ  ಸ್ವಸಹಾಯ ಸಂಘಗಳ ಮೂಲಕ ಹಾಲನ್ನು ಸಂಗ್ರಹಿಸಲು ಅಮುಲ್ ಯೋಜಿಸಿದೆ.

"ಭಾರತದಲ್ಲಿ ಸಹಕಾರಿ ಸಂಸ್ಥೆಗಳು ಪರಸ್ಪರರ ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸದೆ ಅಭಿವೃದ್ಧಿ ಹೊಂದಲು ಅವಕಾಶ ನೀಡುವುದು ರೂಢಿಯಾಗಿದೆ. ಈ ರೀತಿ ಹಾಲು ಸಂಗ್ರಹಣೆಯು 'ಆಪರೇಷನ್ ವೈಟ್ ಫ್ಲಡ್'ನ ಮನೋಭಾವಕ್ಕೆ ವಿರುದ್ಧವಾಗಿದೆ ಹಾಗೂ  ಚಾಲ್ತಿಯಲ್ಲಿರುವ ಹಾಲಿನ ಕೊರತೆಯ ಸನ್ನಿವೇಶದಲ್ಲಿ ಗ್ರಾಹಕರಿಗೆ ಸಮಸ್ಯೆಗಳನ್ನು ಉಲ್ಬಣಗೊಳಿಸುತ್ತದೆ. ಅಮುಲ್‌ನ ಈ ಕಾರ್ಯವು ಆವಿನ್‌ನ (ಟಿಎನ್ ಕೋ-ಆಪರೇಟಿವ್ ಹಾಲು ಉತ್ಪಾದಕರ ಫೆಡರೇಶನ್) ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸುತ್ತದೆ.  ಇದು ದಶಕಗಳಿಂದ ನಿಜವಾದ ಸಹಕಾರ ಮನೋಭಾವದಿಂದ ಪೋಷಿಸಲ್ಪಟ್ಟಿದೆ. ಅಮುಲ್‌ನ ಈ ಕ್ರಮವು ಹಾಲು ಮತ್ತು ಹಾಲಿನ ಉತ್ಪನ್ನಗಳ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿರುವ ಸಹಕಾರಿಗಳ ನಡುವೆ ಅನಾರೋಗ್ಯಕರ ಸ್ಪರ್ಧೆಯನ್ನು ಸೃಷ್ಟಿಸುತ್ತದೆ’’ ಎಂದು ಸ್ಟಾಲಿನ್ ಪತ್ರದಲ್ಲಿ ಬರೆದಿದ್ದಾರೆ.

share
Next Story
X