Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ?:...

ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ?: ಬಿಜೆಪಿ-ಆರೆಸ್ಸೆಸ್ ಗೆ ಅಶೋಕ್ ಗೆಹ್ಲೋಟ್ ಪ್ರಶ್ನೆ

27 May 2023 2:57 PM IST
share
ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ?: ಬಿಜೆಪಿ-ಆರೆಸ್ಸೆಸ್ ಗೆ ಅಶೋಕ್ ಗೆಹ್ಲೋಟ್ ಪ್ರಶ್ನೆ

ಕೋಟಾ: ಬಿಜೆಪಿ- ಆರೆಸ್ಸೆಸ್ ಸಮಾಜದಲ್ಲಿ ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತಿದೆ ಎಂದು ಶುಕ್ರವಾರ ಆರೋಪಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(Ashok Gehlot ) , ಬಿಜೆಪಿ ಹಾಗೂ ಆರೆಸ್ಸೆಸ್  ನವರು ದೇಶದ ದಲಿತರನ್ನು "ಅಪ್ಪಿಕೊಳ್ಳುತ್ತಾರೆಯೇ?" ಎಂದು ಪ್ರಶ್ನಿಸಿದ್ದಾರೆ.

ಗೆಹ್ಲೋಟ್ ಅವರು ಬರಾನ್ ಜಿಲ್ಲೆಯಲ್ಲಿ ಹಿಂದೂ ಸಮುದಾಯದ 2,111 ಹಾಗೂ  ಮುಸ್ಲಿಂ ಸಮುದಾಯದ 111 ಜೋಡಿಗಳು ಸೇರಿದಂತೆ 2,222 ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದ ನೇಪಥ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೆಹ್ಲೋಟ್, ಬಿಜೆಪಿ ಹಾಗೂ ಆರೆಸ್ಸೆಸ್  ನವರು ಭಿನ್ನಾಭಿಪ್ರಾಯ ಮತ್ತು ತಾರತಮ್ಯವನ್ನು ಸೃಷ್ಟಿಸುತ್ತಾರೆ ಹಾಗೂ  ಹರಡುತ್ತಾರೆ. ದೇಶದ ಜನರಲ್ಲಿ ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತಾರೆ ಎಂದು ಆರೋಪಿಸಿದರು.

"ಅಸ್ಪೃಶ್ಯತೆ ಹಳ್ಳಿಗಳಲ್ಲಿ ಹಾಗೂ  ನಗರ ಪ್ರದೇಶಗಳಲ್ಲಿ ಈಗಲೂ  ಇದೆ. ಕೆಳವರ್ಗದವರ ವಿರುದ್ಧ ತಾರತಮ್ಯವಿದೆ. ಇದು ಎಲ್ಲರಿಗೂ ತಿಳಿದಿದೆ" ಎಂದು ಗೆಹ್ಲೋಟ್  ಹೇಳಿದರು.

ಆರೆಸ್ಸೆಸ್  ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ  ಪ್ರಧಾನಿ ನರೇಂದ್ರ ಮೋದಿ ಅವರು ದಲಿತರ ಕಲ್ಯಾಣಕ್ಕಾಗಿ ತಮ್ಮ ಅಲ್ಪಾವಧಿ ಹಾಗೂ  ದೀರ್ಘಕಾಲೀನ ಯೋಜನೆಗಳನ್ನು ಬಹಿರಂಗಪಡಿಸಬೇಕು ಎಂದು ಗೆಹ್ಲೋಟ್ ಒತ್ತಾಯಿಸಿದರು.

"ದಲಿತರನ್ನು ಯಾರು ನೋಡಿಕೊಳ್ಳುತ್ತಿದ್ದಾರೆ? ನೀವು (ಬಿಜೆಪಿ-ಆರೆಸ್ಸೆಸ್) ಅವರಿಗಾಗಿ ಏನು ಮಾಡುತ್ತಿದ್ದೀರಿ? ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ?... ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿರುವುದರಿಂದ ಈ ಪ್ರಶ್ನೆಗಳಿಗೆ  ಉತ್ತರಿಸಬೇಕು" ಎಂದು ಗೆಹ್ಲೋಟ್ ಹೇಳಿದರು.

share
Next Story
X