ಸುರೇಂದ್ರ ರಾಮನ್
ಭಟ್ಕಳ: ಭಟ್ಕಳ ತಾಲೂಕಿನಲ್ಲಿ 10 ವರ್ಷಕ್ಕೂ ಹೆಚ್ಚು ಕಾಲ ಪ್ರಜಾವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದ ತಾಲೂಕಿನ ಶಿರಾಲಿ ಚಿತ್ರಾಪುರದ ನಿವಾಸಿ ಸುರೇಂದ್ರ ರಾಮನ್ (69) ರವಿವಾರ ನಿಧನ ಹೊಂದಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರು ಅನಾರೋಗ್ಯದ ಕಾರಣ ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಇವರ ನಿಧನಕ್ಕೆ ಭಟ್ಕಳ ಪತ್ರಕರ್ತರ ಸಂಘದ ಅಧ್ಯಕ್ಷರು, ಸದಸ್ಯರು ಸಂತಾಪ ಸೂಚಿಸಿದ್ದಾರೆ.
Next Story