ಗುಂಡ್ಮಿ ಶಂಭು ಪೂಜಾರಿ
ಕೋಟ, ಆ.17: ಸಾಸ್ತಾನ ಗುಂಡ್ಮಿ ಬೀಚಿಬೆಟ್ಟು ಶಂಭು ಪೂಜಾರಿ(70) ಆ.17 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.
ಇವರು ಕೋಟ ಮೂರ್ತೇದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಹಾಗೂ ಕೋಟ ಸಹಕಾರಿ ವ್ಯವಸಾಯಕ ಸಂಘದ ಗುಂಡ್ಮಿ ಶಾಖೆಯ ಸಲಹಾ ಸಮಿತಿ ಸದಸ್ಯರಾಗಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸಿ.ಎ.ಬ್ಯಾಂಕ್ ನಿರ್ದೇಶಕ ರವೀಂದ್ರ ಕಾಮತ್, ಹಾಗೂ ಸಂಘದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.
Next Story