ನವೀನ್ ಶೆಟ್ಟಿ ಪಡ್ರೆ
ಸುರತ್ಕಲ್, ಜೂ. 9: ಪಡ್ರೆ ಮೇಲಿನಮನೆ ನಿವಾಸಿ ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಸೀನಿಯರ್ ಮ್ಯಾನೇಜರ್ ನವೀನ್ ಶೆಟ್ಟಿ ಪಡ್ರೆ (69) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 8 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಓರ್ವ ಪುತ್ರ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರು ಸಿಂಡಿಕೇಟ್ ಬ್ಯಾಂಕ್ ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಸುರತ್ಕಲ್ ಬಂಟರ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದ ಅವರು, ಪ್ರಸ್ತುತ ಸಂಘದ ನಿರ್ದೇಶಕರಾಗಿದ್ದರು. ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಅವರು ತನ್ನನ್ನು ತೊಡಗಿಸಿಕೊಂಡಿದ್ದರು.
ಸಂತಾಪ
ನವೀನ್ ಶೆಟ್ಟಿ ಪಡ್ರೆ ಅವರ ನಿಧನಕ್ಕೆ ಸುರತ್ಕಲ್ ಬಂಟರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
Next Story