ಕೊರಗ ದೇವಾಡಿಗ
ಕುಂದಾಪುರ: ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಎಂ.ಕೊರಗ ದೇವಾಡಿಗ (೮೩) ಅವರು ಅಲ್ಪಕಾಲದ ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದರು. ಅವರು ಮೂವರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮರವಂತೆ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗುವ ಮುನ್ನ ಅವರು ವಿವಿಧ ಕಡೆಗಳ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಾಗಿ ದುಡಿದಿದ್ದರು. ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ‘ಕೊರಗಪ್ಪ ಮಾಷ್ಟ್ರು’ ಆಗಿದ್ದ ಇವರು ಮರವಂತೆಯ ಸಾಧನಾ ಸಮಾಜ ಸೇವಾ ವೇದಿಕೆಯ ಸ್ಥಾಪಕರಲ್ಲಿ ಒಬ್ಬರಾಗಿ ಅದರ ಅಧ್ಯಕ್ಷ, ಕಾರ್ಯದರ್ಶಿಯಾಗಿ ದುಡಿದಿದ್ದರು.
Next Story