Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಯುವ ಬಜೆಟ್ ಕನಸು ನನಸಾಗುವುದೇ?

ಯುವ ಬಜೆಟ್ ಕನಸು ನನಸಾಗುವುದೇ?

ಮಾಳಿಂಗರಾಯ ಕೆಂಭಾವಿ, ಯಾದಗಿರಿಮಾಳಿಂಗರಾಯ ಕೆಂಭಾವಿ, ಯಾದಗಿರಿ17 Jan 2023 11:58 PM IST
share

ಮಾನ್ಯರೇ,

ನಮ್ಮ ದೇಶದ ಜನಸಂಖ್ಯೆಯಲ್ಲಿ ಅರ್ಧಕ್ಕಿಂತ ಅಧಿಕವಾಗಿ ಯುವಜನರು ಇದ್ದಾರೆ. ಭಾರತವನ್ನು ಯುವ ಭಾರತವೆಂದೂ ಕರೆಯುತ್ತಾರೆ. ಆದರೆ ಭಾರತದಲ್ಲಿ ಹೆಚ್ಚು ಯುವಜನರು ಇರುವುದು ಎಷ್ಟು ಸತ್ಯವೋ ದೇಶದ ಯುವಜನತೆ ಸಾವಿರ ಸಮಸ್ಯೆಗಳ ಸುಳಿಗೆ ಬಿದ್ದು ಒದ್ದಾಡುತ್ತಿರುವುದೂ ಸತ್ಯವೇ!
ಶಿಕ್ಷಣ, ಉದ್ಯೋಗ, ಆರೋಗ್ಯ, ಸೇವಿಸುವ ಆಹಾರ, ಹಾಕಿಕೊಳ್ಳುವ ಬಟ್ಟೆ, ಇಷ್ಟಪಟ್ಟ ಸಂಗಾತಿಯ ಆಯ್ಕೆ... ಹೀಗೆ ಪ್ರತಿಯೊಂದರಲ್ಲೂ ಈಗ ಯುವ ಜನತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರತೀ ಹಂತದಲ್ಲೂ ಯುವಜನರು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಾ ಬಳಲುತ್ತಿದ್ದಾರೆ.
 ಮಹಿಳೆಯರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅವರ ಹಕ್ಕುಗಳನ್ನು ಸಂರಕ್ಷಿಸಲು, ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಲು ಯಾವ ರೀತಿಯಾಗಿ ಮಹಿಳೆ ಮತ್ತು ಮಕ್ಕಳ ಆಯೋಗಗಳು ಇವೆಯೋ.. ಹಾಗೆಯೇ ಯುವಜನರ ಹಕ್ಕುಗಳನ್ನು ರಕ್ಷಿಸಲು ಯುವಜನ ಆಯೋಗ ಜಾರಿಗೊಳಿಸುವುದು ಅವಶ್ಯವಾಗಿದೆ. ಅದರ ಜೊತೆಗೆ ಯುವಜನರು ತಮ್ಮ ಸಮಸ್ಯೆಗಳನ್ನು ಹೇಳಲು ಮತ್ತು ಎಲ್ಲಾ ರೀತಿಯ ಸಬಲೀಕರಣಗೊಳ್ಳಲು ಯುವಜನ ಸಬಲೀಕರಣ ನಿಗಮದಂತಹ ಸಾಂಸ್ಥಿಕ ವ್ಯವಸ್ಥೆ ನಿರ್ಮಾಣವಾಗಬೇಕಿದೆ
ಸರಕಾರದ ವಿವಿಧ ಇಲಾಖೆಗಳಲ್ಲಿ ಯುವಜನರಿಗೆ ಸಂಬಂಧಿಸಿದ ಹಲವಾರು ಯೋಜನೆಗಳಿವೆ. ಅವುಗಳಿಗೆ ಅಂದಾಜು 20 ಸಾವಿರ ಕೋಟಿ ರೂ. ಗಳಿಗೂ ಅಧಿಕ ಹಣ ಲಭ್ಯವಾಗುತ್ತದೆ ಎಂದು ಯುವಜನ ಸಬಲೀಕರಣ ಇಲಾಖೆ ತಿಳಿಸುತ್ತದೆಯಾದರೂ, ಅದರಲ್ಲಿ ಖರ್ಚಾಗುವುದೆಷ್ಟು ಎಂದು ದೇವರೇ ಬಲ್ಲ. ವರ್ಷಕ್ಕೊಂದು ಯುವಜನೋತ್ಸವ ಕಾರ್ಯಕ್ರಮ, ಕ್ರೀಡಾ ಟೂರ್ನಮೆಂಟ್‌ಗಳು, ಅಲ್ಲಲ್ಲಿ ಕ್ರೀಡಾ ಮೈದಾನಗಳ ತೇಪೆ... ಇಂತಹ ಕೆಲಸಗಳಲ್ಲೇ ಹಣ ವ್ಯರ್ಥವಾದರೆ ಯುವಜನರ ಸಬಲೀಕರಣವಾಗುವುದು ಹೇಗೆ? ಯುವಜನರು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಬೇಕಾದರೆ ಪ್ರಸಕ್ತ ಸಮಯಕ್ಕೆ ಬೇಕಾದ ಪೂರಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು.
 
ಈ ಮೊದಲು ಯಡಿಯೂರಪ್ಪನವರ ಅಧಿಕಾರವಿದ್ದಾಗಲೇ ಯುವಜನರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವುದಾಗಿ ಹೇಳಿದ್ದರು. ಆದರೆ ಅದು ನೆರವೇರಲಿಲ್ಲ. ಈಗ ಬಸವರಾಜ ಬೊಮ್ಮಾಯಿಯವರು ಯುವಜನರ ಅಭಿವೃದ್ಧಿಗೆ ಸಾರ್ವಜನಿಕ ಹಣಕಾಸು ಪೂರೈಕೆ ವ್ಯವಸ್ಥಿತಗೊಳಿಸುವಂತೆ ನೆರವಾಗಲು ವಾರ್ಷಿಕ ಯುವ ಬಜೆಟ್ ಮಂಡಿಸುವುದಾಗಿ ಹೇಳಿದ್ದಾರೆ. ಹಾಗಾಗಿ ಈ ಬಾರಿಯಾದರೂ ಯುವ ಬಜೆಟ್ ಕನಸು ನನಸಾದರೆ ಯುವಜನರ ಅಭಿವೃದ್ಧಿಗೆ ಬಲ ಬಂದೀತು. 

share
ಮಾಳಿಂಗರಾಯ ಕೆಂಭಾವಿ, ಯಾದಗಿರಿ
ಮಾಳಿಂಗರಾಯ ಕೆಂಭಾವಿ, ಯಾದಗಿರಿ
Next Story
X