ರಾಜಸ್ಥಾನದ ಕಾಂಗ್ರೆಸ್ ರ್ಯಾಲಿಯಲ್ಲಿ ಕುಸಿದು ಬಿದ್ದ ವೇದಿಕೆ!
ಜೈಪುರ,ಅ.17: ರಾಜಸ್ಥಾನದ ಟೋಂಕ್ನಲ್ಲಿ ಕಾಂಗ್ರೆಸ್ ರ್ಯಾಲಿಯ ವೇಳೆ ವೇದಿಕೆ ಕುಸಿದು ಬಿದ್ದಂತಹ ವಿಲಕ್ಷಣ ಘಟನೆ ವರದಿಯಾಗಿದೆ. ವೇದಿಕೆಯ ಮೇಲೆ ಸಾಮರ್ಥ್ಯಕ್ಕಿಂತ ಹೆಚ್ಚು ಕಾರ್ಯಕರ್ತರು ಜಮಾಯಿಸಿದ ಹಿನ್ನೆಲೆಯಲ್ಲಿ ವೇದಿಕೆ ಕುಸಿದು ಬಿದ್ದಿದೆ ಎನ್ನಲಾಗಿದೆ.
ಕಾಂಗ್ರೆಸ್ ಅಯೋಜಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಸಹಿತ ಹಲವು ನಾಯಕರು ಉಪಸ್ಥಿತರಿದ್ದರು. ಘಟನೆಯಿಂದ ಯಾವುದೇ ಸಾವು-ನೋವು ಉಂಟಾದ ಬಗ್ಗೆ ವರದಿಯಾಗಿಲ್ಲ.
Next Story