ಗಂಗೊಳ್ಳಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು
ಗಂಗೊಳ್ಳಿ : ಮರವಂತೆ ಗ್ರಾಮದ ಗಾಂಧಿನಗರ ನೈಕಾಡಿ ಮನೆ ಎಂಬಲ್ಲಿ ಎ.23ರ ಬೆಳಗ್ಗೆಯಿಂದ ಎ.25ರ ಬೆಳಗಿನ ಮಧ್ಯಾವಧಿಯಲ್ಲಿ ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ರವೀನಾ ಎಂಬವರ ಮನೆಯ ಬಾಗಿಲು ತೆಗೆದು ಒಳ ಪ್ರವೇಶಿಸಿ, ಕಪಾಟಿನ ಬೀಗವನ್ನು ತೆಗೆದು ಲಾಕರ್ನಲ್ಲಿಟ್ಟಿದ್ದ ಚಿನ್ನದ ಕರಿಮಣಿ ಸರ, ಚಿನ್ನದ ಕಿವಿಯ ಬೆಂಡೋಲೆ ೧ ಜೊತೆ ಹಾಗೂ ೮,೫೦೦ರೂ. ನಗದು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಲಾಗಿದೆ. ಇವುಗಳ ಒಟ್ಟು ಮೌಲ್ಯ ೧,೩೮,೫೦೦ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story