ಶಿಕ್ಷಕರ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಉಡುಪಿ, ಮೇ೧೮: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮೇ ೨೧ ಹಾಗೂ ೨೨ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ ೬ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿ ಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆ ನಡೆಯುವ ದಿನಗಳಂದು ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ೨೦೦ಮೀ. ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ೧೯೭೩ರ ಕ್ರಿಮಿನಲ್ ಪ್ರೊಸಿಜರ್ ಕೋಡ್ ಸೆಕ್ಷನ್ ೧೪೪(೧)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
Next Story