ಎಸೆಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಮಲ್ಪೆ : ಎಸ್ಐಓ ಹಾಗೂ ಜಿಐಓ ಮಲ್ಪೆ ಘಟಕದ ವತಿಯಿಂದ ೨೦೨೧-೨೨ನೇ ಸಾಲಿನ ಶೈಕ್ಷಣಿಕ ವರ್ಷದ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಮಲ್ಪೆಯ ಸರಕಾರಿ ಮತ್ತು ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಮಲ್ಪೆಯ ಸಭಾಭವನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಎಸ್ಐಓ ಜಿಲ್ಲಾ ಕಾರ್ಯದರ್ಶಿ ಡಾ.ಫಹೀಂ ಅಬ್ದುಲ್ಲಾ, ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸತೀಶ್ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ ಬಂಗೇರ, ಮಲ್ಪೆಗಾಂಧಿ ಶತಾಬ್ದಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಿಶ್ವಾಸ್ ಭಾಗವಹಿಸಿದ್ದರು.
Next Story