ಉಡುಪಿ: ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಸತತವಾಗಿ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲವೂ ಹೆಚ್ಚು ಮಳೆಯಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 1ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.
Next Story