ಮನೆಗೆ ನುಗ್ಗಿ ಸೊತ್ತು ಕಳವು
ಬ್ರಹ್ಮಾವರ: ಬಾರಕೂರು ಎನ್ಜೆಸಿ ಕಾಲೇಜಿನ ಎದುರಿನ ಮನೆಗೆ ಜೂ.೩೦ರಂದು ಹಾಡುಹಗಲೇ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಸಂಗೀತಾ ಎಂಬವರು ಮನೆಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದ ಸಂದರ್ಭ ಮನೆಯ ಎದುರು ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಕಬ್ಬಿಣದ ಟ್ರಂಕ್ನಲ್ಲಿದ್ದ ಚಿನ್ನಾಭರಣ ಹಾಗೂ ಒಂದು ಜೊತೆ ಬೆಳ್ಳಿಯ ಕಾಲುಚೈನ್ ಕಳವು ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ ೯೦,೦೦೦ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story