ರಸ್ತೆ ಗುಂಡಿಗೆ ಬಿದ್ದ ಸ್ಕೂಟರ್: ಸವಾರ ಮೃತ್ಯು
ಹಿರಿಯಡ್ಕ : ಸ್ಕೂಟರೊಂದು ರಸ್ತೆಯ ಗುಂಡಿಗೆ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೊಮ್ಮರಬೆಟ್ಟು ಗ್ರಾಮದ ಸಧಾನ ಕಂಪೌಂಡ್ ಬಳಿ ಜು.೭ರಂದು ಮಧ್ಯರಾತ್ರಿ ವೇಳೆ ನಡೆದಿದೆ.
ಮೃತರನ್ನು ಶರತ್ ಶೆಟ್ಟಿ(55) ಎಂದು ಗುರುತಿಸಲಾಗಿದೆ. ಇವರು ಕೆಲಸ ಮುಗಿಸಿ ಮನೆಗೆ ಸ್ಕೂಟರ್ನಲ್ಲಿ ಹೋಗುತ್ತಿದ್ದ ವೇಳೆ ಸ್ಕೂಟರ್ ರಸ್ತೆಯ ಗುಂಡಿಗೆ ಬಿತ್ತೆನ್ನಲಾಗಿದೆ. ಇದರಿಂದ ಸವಾರ ಸ್ಕೂಟರ್ ಸಹಿತ ರಸ್ತೆಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಶರತ್ ಶೆಟ್ಟಿ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story