Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು ಸಮೀಪ ಕಾರು ಸಹಿತ ಮಹಿಳೆಯ...

ಬೈಂದೂರು ಸಮೀಪ ಕಾರು ಸಹಿತ ಮಹಿಳೆಯ ಸುಟ್ಟು ಕೊಲೆ

► ತಲೆಮರೆಸಿಕೊಂಡ ಆರೋಪಿಗಾಗಿ ಶೋಧ ►ಎರಡು ತನಿಖಾ ತಂಡ ರಚನೆ

ವಾರ್ತಾಭಾರತಿವಾರ್ತಾಭಾರತಿ13 July 2022 9:21 PM IST
share
ಬೈಂದೂರು ಸಮೀಪ ಕಾರು ಸಹಿತ ಮಹಿಳೆಯ ಸುಟ್ಟು ಕೊಲೆ

ಬೈಂದೂರು: ಮಹಿಳೆಯೊಬ್ಬರನ್ನು ಕಾರು ಸಹಿತ ಸುಟ್ಟು ಕೊಲೆ ಮಾಡಿರುವ ಘಟನೆ ಬೈಂದೂರು ತಾಲೂಕಿನ ಒತ್ತಿನೆಣೆ ಸಮೀಪದ ಹೇನ ಬೇರು ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಮೃತರನ್ನು ಕಾರ್ಕಳದ ಶಿಲ್ಪಾ ಎಂದು ಗುರುತಿಸಲಾಗಿದೆ.

ಕಾರಿನ ಮಾಲಕನನ್ನು ಕಾರ್ಕಳದ ಸದಾನಂದ ಶೇರಿಗಾರ್ (54) ಎಂದು ಗುರುತಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಸರ್ವೆಯರ್ ಕೆಲಸ ನಿರ್ವಹಿಸುತ್ತಿದ್ದ ಈತನೇ ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಬೈಂದೂರು- ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಹೇನಬೇರು ಎಂಬಲ್ಲಿಗೆ ತೆರಳುವ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಸಂಪೂರ್ಣ ಸುಟ್ಟು ಹೋದ ಸ್ಥಿತಿಯಲ್ಲಿ ಕಾರು ಹಾಗೂ ಕಾರಿನೊಳಗೆ ಹಿಂಬದಿ ಸೀಟಿನಲ್ಲಿ ತಲೆಬುರುಡೆ ಕಾಣುವ ರೀತಿಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ಪೋರ್ಡ್ ಐಕಾನ್ ಕಂಪೆನಿಯ ಕಾರು, ಚಾಸ್ಸಿಸ್ ಹಾಗೂ ಎಂಜಿನ್ ನಂಬರ್ ಕೂಡ ಗುರುತಿಸಲಾಗದಷ್ಟು ಸುಟ್ಟು ಹೋಗಿತ್ತು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಘಟನಾ ಸ್ಥಳದಲ್ಲಿ ಪೆಟ್ರೋಲ್ ತುಂಬಿಸಿ ಖಾಲಿಯಾಗಿರುವ ಬಾಟಲಿಗಳು ಪತ್ತೆಯಾಗಿದ್ದವು. ಈ ಮೂಲಕ ಇದೊಂದು ಕೊಲೆ ಎಂಬುದಾಗಿ ಮನಗಂಡ ಪೊಲೀಸರು ಆ ದಿಕ್ಕಿನಲ್ಲಿ  ತನಿಖೆ ಕೈಗೆತ್ತಿಕೊಂಡರು.

ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು, ಕಾರಿನ ಆರ್‌ಸಿ ಮಾಲಕನ ಸದಾನಂದ ಶೇರಿಗಾರ್‌ನ ಹೆಸರು, ವಿಳಾಸ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು.

ಸದಾನಂದ ಶೇರಿಗಾರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಆತನಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಕೆ.ಶ್ರೀಕಾಂತ್, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಎಸ್ಸೈ ಪವನ್ ನಾಯ್ಕ್ ಹಾಗೂ ಫೊರೆನ್ಸಿಕ್ ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹದ ಮರಣೋತ್ತರ ಪರೀಕ್ಷೆ ಮಣಿಪಾಲ ಆಸ್ಪತ್ರೆಯಲ್ಲಿ ನಡೆಸಲಾಗಿದೆ.

"ಪ್ರಕರಣದ ಆರೋಪಿ ಹಾಗೂ ಮೃತ ಮಹಿಳೆಯ ಗುರುತು ಪತ್ತೆ ಹಚ್ಚಲಾಗಿದ್ದು, ಕಾರಿನ ಮಾಲಕನೇ ಕೊಲೆ ಮಾಡಿರುವ ಬಗ್ಗೆ ತನಿಖೆಯಿಂದ ತಿಳಿದು ಬಂದಿದೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧ ಕಾರ್ಯ ನಡೆಸ ಲಾಗುತ್ತಿದೆ. ಅದಕ್ಕಾಗಿ ತನಿಖಾಧಿಕಾರಿ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಗಂಗೊಳ್ಳಿ ಹಾಗೂ ಬೈಂದೂರು ಎಸ್ಸೈಗಳ ಎರಡು ತಂಡಗಳನ್ನು ರಚಿಸಲಾಗಿದೆ".  
-ಎಸ್.ಟಿ.ಸಿದ್ಧಲಿಂಗಪ್ಪ, ಹೆಚ್ಚುವರಿ ಎಸ್ಪಿ, ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X