Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೆಳಪುವಿನಲ್ಲಿ ಅಲ್‍ಫಲಾಹ್ ಕ್ಲಿನಿಕ್...

ಬೆಳಪುವಿನಲ್ಲಿ ಅಲ್‍ಫಲಾಹ್ ಕ್ಲಿನಿಕ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ14 July 2022 9:13 PM IST
share
ಬೆಳಪುವಿನಲ್ಲಿ ಅಲ್‍ಫಲಾಹ್ ಕ್ಲಿನಿಕ್ ಉದ್ಘಾಟನೆ

ಕಾಪು: ಜಂಇಯ್ಯತುಲ್ ಫಲಾಹ್ ಕಾಪು ಶಾಖೆಯ ವತಿಯಿಂದ ಬೆಳಪುವಿನ ರೆಹ್ಮಾನಿಯಾ ಸರ್ಕಲ್ ಬಳಿ ನಿರ್ಮಿಸಲಾದ ಅಲ್ ಫಲಾಹ್ ಕ್ಲಿನಿಕ್‍ನ್ನು ಅಬ್ಕೋ ಗ್ರೂಪ್‍ನ ಆಡಳಿತ ನಿರ್ದೇಶಕ ಮುಹಮ್ಮದ್ ಅಸ್ಲಂ ಖಾಝಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೋರ್ವನಿಗೂ ಶಿಕ್ಷಣ ಹಾಗೂ ಆರೋಗ್ಯ ಅತೀ ಮುಖ್ಯ. ಈ ನಿಟ್ಟಿನಲ್ಲಿ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಮೂಲಕ ಆರೋಗ್ಯವಂತರನ್ನಾಗಿಸುವ ಜವಾಬ್ದಾರಿ ಪ್ರತಿಯೋರ್ವರಿಗೂ ಇದೆ. ಈ ಬಗ್ಗೆ ಹೆತ್ತವರು ಚಿಂತನೆ ನಡೆಸಬೇಕು ಎಂದು ಕರೆ ನೀಡಿದರು.

ದ.ಕ. ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಬೆಳೆಯುತ್ತಿರುವ ಬೆಳಪು ಗ್ರಾಮಕ್ಕೆ ಆಸ್ಪತ್ರೆಯೊಂದು ಅಗತ್ಯತೆ ಇತ್ತು. ಈ ನಿಟ್ಟಿನಲ್ಲಿ ಜಂಇಯ್ಯತುಲ್ ಫಲಾಹ್ ಮೂಲಕ ಅರೋಗ್ಯ ಕೇಂದ್ರ ತೆರೆದಿರುವುದು ಇಲ್ಲಿನ ಜನರ ಭಾಗ್ಯ. ಇದರ ಸದುಪಯೋಗವನ್ನು ಇಲ್ಲಿನ ಜನತೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಉಡುಪಿಯ ಲಂಬೊರ್ಡ್ ಮೆಮೋರಿಯಲ್ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ಮಾತನಾಡಿ, ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಜೀವನವನ್ನು ನಡೆಸುವುದರೊಂದಿಗೆ ಇನ್ನೊಬ್ಬರ ಸೇವೆಯಲ್ಲೂ ತೊಡಗಿಸಿಕೊಳ್ಳುವುದು ಒಂದು ಉತ್ತಮ ಕೆಲಸವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಂಇಯ್ಯತುಲ್ ಫಲಾಹ್ ದಕ, ಉಡುಪಿ ಜಿಲ್ಲಾ ಅಧ್ಯಕ್ಷ ಶಭಿ ಅಹಮದ್ ಖಾಝಿ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಸಾಮಾಜಿಕ ಕ್ಷೇತ್ರಗಳಲ್ಲಿ ಜಂಇಯ್ಯತುಲ್ ಫಲಾಹ್ ಸೇವೆ ನೀಡುವುದು ಧ್ಯೇಯೆಯಾಗಿದೆ. ಈ ನಿಟ್ಟಿನಲ್ಲಿ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬೆಳಪುವಿನಲ್ಲಿ ಆರೋಗ್ಯ ಕೇಂದ್ರ ತೆರೆದಿರುವುದಾಗಿ. ಬೆಳಪು ಗ್ರಾಪಂ ಮನವಿಯ ಮೇರೆಗೆ ಆಂಬುಲೆನ್ಸ್ ನೀಡುವ ಬಗ್ಗೆ ಶೀಘ್ರದಲ್ಲಿಯೇ ನೀಡುವ ಭರವಸೆಯನ್ನು ನೀಡಿದರು. 

ಅನಿವಾಸಿ ಉದ್ಯಮಿ ಅಬ್ದುಲ್ ಜಲೀಲ್ ಸಾಹೇಬ್ ಉದ್ಯಾವರ, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಭಟ್, ಡಾ. ಗಣೇಶ್ ಕಾಮತ್, ಸಿರಾಜುದ್ದೀನ್ ಕಾಜಿ, ಶಾಹಿಜಾನ್ ಖಾಝಿ, ಜೆಎಫ್‍ಸಿಸಿ ದಕ, ಉಡುಪಿ ಪ್ರಧಾನ ಕಾರ್ಯದರ್ಶಿ ಫಝಲುರ್ರಹ್ಮನ್, ಕೋಶಾಧಿಕಾರಿ ಎಫ್‍ಎಮ್ ಬಶೀರ್, ಮಾಜಿ ಅಧ್ಯಕ್ಷ ಇಬ್ರಾಹಿಮ್ ಕೋಟ, ಕಾಸಿಂ ಬಾರ್ಕೂರು, ಮಾಜಿ ಅಧ್ಯಕ್ಷ ಅ‌ಶ್ಫಾಕ್ ಅಹಮದ್, ಆಲಿ ಫರ್ವೇಝ್, ಎನ್‍ಆರ್‍ಸಿಸಿ ಸದಸ್ಯ, ಅಬ್ದುಲ್ ರಶೀದ್, ಮೊಯಿದಿನ್, ರವೂಫ್ ಮೂಡಬಿದ್ರಿ, ಮುಹಮ್ಮದ್ ರಫೀಕ್ ಜಿದ್ದಾ, ಮುಹಮ್ಮದ್ ಸಲೀಂ ಜುಬೈಲ್, ಶಮೀರ್ ಖಾಝಿ, ಶಾಬಿರ್ ಆಲಿ, ಮುಸ್ತಾಕ್ ಅಹಮದ್, ನಝೀರ್, ಸಾಧಿಕ್ ದೀನಾರ್, ನಝೀರ್, ಬಶೀರ್ ಫಕೀರ್ಣಕಟ್ಟೆ ಉಪಸ್ಥಿತರಿದ್ದರು.

ಬೆಳಪು ಮಿನಾರಾ ಮಸ್ಜಿದ್‍ನ ಮೌಲಾನಾ ಅಬು ಹಸನ್ ಖಿರಾತ್ ಪಠಿಸಿದರು. ಜಂಇಯ್ಯತುಲ್ ಫಲಾಹ್ ಕಾಪು ಯುನಿಟ್ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ಅನ್ವರ್ ಆಲಿ ಕಾರ್ಯಕ್ರಮ ನಿರೂಪಿಸಿದರು.

ತಂದೆ ತಾಯಿಯ ನೆನಪಿಗಾಗಿ: 1000 ಚದರ ಅಡಿ ಕಟ್ಟಡದಲ್ಲಿ ಡಾ. ಗಣೇಶ್ ಕಾಮತ್ ಅವರ ತಂಡ ಅಲ್ ಫಲಾಹ್‌ ಕ್ಲಿನಿಕ್‌ ನಲ್ಲಿ ಸೇವೆಗೆ ಲಭ್ಯವಿದ್ದಾರೆ. ಈ ಕಟ್ಟಡವನ್ನು ಇನ್ನೂ ವಿಸ್ತರಿಸಲು 1100 ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಉದ್ಯಮಿ ಅಸ್ಲಂ ಖಾಝಿ ಅವರ ತಂದೆ ತಾಯಿಯ ನೆನಪಿಗಾಗಿ ಕಟ್ಟಡವನ್ನು ನಿರ್ಮಿಸಿದ್ದಾರೆ. ಈ ಕೇಂದ್ರದಲ್ಲಿ ಜನರಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X