ಮಣಿಪಾಲ: ರೆಸ್ಟೋರೆಂಟ್ ಬೆಂಕಿಗಾಹುತಿ; ಲಕ್ಷಾಂತರ ರೂ. ನಷ್ಟ.
ಮಣಿಪಾಲ: ಮಣಿಪಾಲ ಎಂಐಟಿ ಎದುರಿನ ವಸತಿಗೃಹದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು ವಸತಿಗೃಹದಲ್ಲಿದ್ದ ರೆಸ್ಟೋರೆಂಟ್ ಒಂದು ಸುಟ್ಟು ಕರಕಲಾದ ಘಟನೆ ಸಂಭವಿಸಿದೆ.
ಇಲ್ಲಿನ ಖಾಸಗಿ ಲಾಡ್ಜ್ ನ ರೆಸ್ಟೋರೆಂಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಮಿಲಿ ರೆಸ್ಟೋರೆಂಟ್ ನ್ನು ವ್ಯಾಪಿಸಿತು.
ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಾಯಿತು. ಸತತ ಕಾರ್ಯಚರಣೆಯಿಂದ ಬೆಂಕಿ ನಂದಿಸಲಾಗಿದೆ.
ಆದರೆ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ.ನಷ್ಟ ಸಂಭವಿಸಿದೆ. ರೆಸ್ಟೋರೆಂಟ್ ನ ಫರ್ನಿಚರ್ಗಳು , ಪೀಠೋಪಕರಣಗಳ ಜೊತೆಗೆ ಸಾಕಷ್ಟು ಮದ್ಯದ ಬಾಟಲಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.