ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ
ಉಡುಪಿ, ಆ.13: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಶಿರ್ವ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ, 18 ಪ್ರಕರಣಗಳನ್ನು ದಾಖಲಿಸಿ, 3250 ರೂ. ದಂಡ ವಸೂಲಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯರಾವ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಶಿರ್ವ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಸಂಜೀವ ಎಂ ಮತ್ತಿತರರು ಉಪಸ್ಥಿತರಿದ್ದರು.
Next Story