ತಿರಂಗ ವರ್ಣದಲ್ಲಿ ಕಂಗೊಳಿಸಿದ ಕನಕ ಗೋಪುರ!
ಉಡುಪಿ : ಶ್ರೀಕೃಷ್ಣ ಮಠ, ಪರ್ಯಾಯ ಶ್ರೀಕೃಷ್ಣಾಪುರ ಮಠ ಉಡುಪಿ ಆಶ್ರಯದಲ್ಲಿ ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ನೇತೃತ್ವದಲ್ಲಿ ಪಂಚಮಿ ಟ್ರಸ್ಟ್, ಗಾಂಧಿ ಆಸ್ಪತ್ರೆ ಸಹಯೋಗ ದೊಂದಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಉಡುಪಿಯ ರಥಬೀದಿಯಲ್ಲಿರುವ ಕನಕ ಗೋಪುರವು ತಿರಂಗಾ ಬಣ್ಣದ ಬೆಳಕಿನೊಂದಿಗೆ ಕಂಗೊಳಿಸಿತು.
ದೀಪಾಲಂಕಾರಕ್ಕೆ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಶನಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪರ್ಕಳದ ನಿವೃತ್ತ ಯೋಧ ಕೃಷ್ಣ ಶೆಟ್ಟಿಬೆಟ್ಟು ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ.ಹರಿಶ್ಚಂದ್ರ, ನಗರಸಭಾ ಸದಸ್ಯ ವಿಜಯ ಕೊಡವೂರು, ರೋಟರಿ ಉಡುಪಿ ರಾಯಲ್ ಅಧ್ಯಕ್ಷ ಪ್ರೊ.ಬಾಲಕೃಷ್ಣ ಮದ್ದೋಡಿ, ಕಾರ್ಯಕ್ರಮ ಸಂಚಾಲಕ ಆಸ್ಟ್ರೋ ಮೋಹನ್, ಉಪಾಧ್ಯಕ್ಷ ಪ್ರವೀಣ್ ಹೂಡೆ, ಕಸಾಪ ಉಡುಪಿ ತಾಲೂಕು ಘಟಕಾಧ್ಯಕ್ಷ ರವಿರಾಜ್ ಎಚ್.ಪಿ., ಛಾಯಾಗ್ರಾಹಕರ ಸಂಘದ ಪದಾಧಿಕಾರಿ ಗಳು ಉಪಸ್ಥಿತರಿದ್ದರು.
ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಅಧ್ಯಕ್ಷ ಜನಾರ್ದನ ಕೊಡವೂರು ಸ್ವಾಗತಿಸಿದರು. ದಿವಾಕರ್ ಹಿರಿಯಡ್ಕ ವಂದಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ಸೋಮವಾರವರೆಗೆ ಪ್ರತಿದಿನ ಸಂಜೆ 6.30ರಿಂದ ರಾತ್ರಿ 10ರವರೆಗೆ ವಿಶೇಷ ವಿದ್ಯುದ್ದೀಪಗಳ ಶೃಂಗಾರದಿಂದ ಗೋಪುರ ಕಂಗೊಳಿಸಲಿದೆ.