Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಧಿಕೃತ ಪುಣ್ಯಕ್ಷೇತ್ರವಾಗಿ ಕಲ್ಮಾಡಿ...

ಅಧಿಕೃತ ಪುಣ್ಯಕ್ಷೇತ್ರವಾಗಿ ಕಲ್ಮಾಡಿ ವೆಲಂಕಣಿ ಮಾತೆ ಕೇಂದ್ರ; ಉಡುಪಿ ಧರ್ಮಪ್ರಾಂತದ ಬಿಷಪ್ ಅ.ವಂ.ಡಾ.ಲೋಬೊ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ15 Aug 2022 7:37 PM IST
share
ಅಧಿಕೃತ ಪುಣ್ಯಕ್ಷೇತ್ರವಾಗಿ ಕಲ್ಮಾಡಿ ವೆಲಂಕಣಿ ಮಾತೆ ಕೇಂದ್ರ; ಉಡುಪಿ ಧರ್ಮಪ್ರಾಂತದ ಬಿಷಪ್ ಅ.ವಂ.ಡಾ.ಲೋಬೊ ಘೋಷಣೆ

ಉಡುಪಿ : ವಿಶ್ವ ಪ್ರಸಿದ್ದ ಕಲ್ಮಾಡಿ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತಕ್ಕೆ ಒಳಪಟ್ಟ ಅಧಿಕೃತ ಪುಣ್ಯಕ್ಷೇತ್ರವೆಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷರಾದ ಅ.ವಂ. ಡಾ. ಜೆರಾಲ್ಡ್ ಐಸಾಕ್ ಲೋಬೋ ಆ.15ರಂದು ವಿದ್ಯುಕ್ತವಾಗಿ ನಡೆದ ಪವಿತ್ರ ಬಲಿಪೂಜೆಯಲ್ಲಿ ಘೋಷಿಸಿದ್ದಾರೆ.

ಇದೇ ವೇಳೆ ಉಡುಪಿ ಧರ್ಮಪ್ರಾಂತದ ಕುಲಪತಿಗಳಾದ ವಂ. ಸ್ಟ್ಯಾನಿ ಬಿ ಲೋಬೋ ಪುಣ್ಯಕ್ಷೇತ್ರದ ಘೋಷಣಾ ಪತ್ರವನ್ನು ವಾಚಿಸಿದರು. ಈ ಸಂದರ್ಭದಲ್ಲಿ ಉಡುಪಿ ಬಿಷಪ್ ಡಾ. ಜೆರಾಲ್ಡ್ ಲೋಬೋ ದಿವ್ಯ ಬಲಿಪೂಜೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಬಲಿಪೂಜೆಯಲ್ಲಿ ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ್ಯ ಡಾ.ಪೀಟರ್ ಪೌಲ್ ಸಲ್ಡಾನ್ಹಾ, ಶಿವಮೊಗ್ಗ ಧರ್ಮಪ್ರಾಂತದ ಧರ್ಮಾಧ್ಯಕ್ಷ್ಯ ಡಾ.ಫ್ರಾನ್ಸಿಸ್ ಸೆರಾವೋ, ಬಳ್ಳಾರಿ ಧರ್ಮ ಪ್ರಾಂತದ ಧರ್ಮಾಧ್ಯಕ್ಷ್ಯ ಡಾ.ಹೆನ್ರಿ ಡಿಸೋಜ, ಕಲ್ಬುರ್ಗಿ ಧರ್ಮಪ್ರಾಂತದ ಧರ್ಮಾಧ್ಯಕ್ಷ್ಯ ಡಾ.ರಾಬರ್ಟ್ ಮಿರಾಂದಾ, ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ.ಲಾರೆನ್ಸ್ ಮುಕ್ಕುಜಿ, ಪುತ್ತೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ.ಗೀವರ್ಗೀಸ್ ಮಾರ್ ಮಕಾರಿಯೋಸ್ ಕಲಾಯಿಲ್, ಉಡುಪಿ ಧರ್ಮಪ್ರಾಂತದ ಕುಲಪತಿ ಸ್ಟಾನಿ ಬಿ ಲೋಬೋ, ವಂ. ಚಾರ್ಲ್ಸ್ ಮೆನೇಜಸ್, ಕಲ್ಮಾಡಿ ಸ್ಟೆಲ್ಲಾ ಮಾರಿಸ್ ದೇವಾಲಯದ ಪ್ರಧಾನ ಧರ್ಮಗುರು ವಂ. ಬ್ಯಾಪ್ಟಿಸ್ಟ್ ಮಿನೇಜಸ್, ಸಹಾಯಕ ಧರ್ಮಗುರು ವಂ.ಮೆಲ್ವಿಲ್ ರೊಯ್ ಲೋಬೋ ಮತ್ತು ಧರ್ಮಪ್ರಾಂತದ ಇತರ ಧರ್ಮಗುರುಗಳು ಕಲ್ಮಾಡಿಯಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದರೊಂದಿಗೆ ಸ್ಟೆಲ್ಲಾ ಮಾರಿಸ್ ದೇವಾಲಯದ ಸುವರ್ಣ ಮಹೋತ್ಸವದ ಸನ್ಮಾನ ಸಮಾರಂಭ ಕೂಡಾ ನಡೆಯಿತು. ಕಾರ್ಯಕ್ರಮದಲ್ಲಿ ದೇವಾಲಯದ ಧರ್ಮಗುರುಗಳು ಮತ್ತು ಧರ್ಮಭಗಿನಿಯರು ಹಾಗೂ ಕಳೆದ 50 ವರ್ಷಗಳಲ್ಲಿ ಸೇವೆ ಸಲ್ಲಿಸಿದ ದೇವಾಲಯದ ಪಾಲನ ಮಂಡಳಿಯ ಉಪಾಧ್ಯಕ್ಷ್ಯ ಕಾರ್ಯದರ್ಶಿ ಮತ್ತು ವಾರ್ಡಿನ ಗುರಿಕಾರರನ್ನು ಸನ್ಮಾನಿಸಲಾಯಿತು. 

ಸುವರ್ಣ ಮಹೋತ್ಸವದ ಶಾಶ್ವತ ಯೋಜನೆಯಾಗಿ ಆರೋಗ್ಯ ನಿಧಿಗೆ ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೋ ಚಾಲನೆ ನೀಡಿದರು. ಸುವರ್ಣ ಮಹೋತ್ಸವದ ಸ್ಮರಣ ಸಂಚಿಕೆಯನ್ನು ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪೌಲ್ ಸಲ್ಡಾನ ಬಿಡುಗಡೆಗೊಳಿಸಿದರು. 

ಪ್ರಧಾನ ಧರ್ಮಗುರು ವಂ.ಬ್ಯಾಪ್ಟಿಸ್ಟ್ ಮಿನೇಜಸ್ ಸ್ವಾಗತಿಸಿ, ಕಾರ್ಯದರ್ಶಿ ಶೋಭಾ ಮೆಂಡೋನ್ಸಾ ವಂದಿಸಿದರು. ಹೆನ್ರಿ ಪೂರ್ಟಾಡೋ ಮತ್ತು ಜೆನವಿವ್ ಲೋಬೋ ಕಾರ್ಯಕ್ರಮ ನಿರ್ವಹಿಸಿದರು. 

ಕಾರ್ಯಕ್ರಮದಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷ ಸಂಜಯ್ ಅಂದ್ರಾದೆ, ಕಾರ್ಯದರ್ಶಿ ಶೋಭಾ ಮೆಂಡೋನ್ಸ, ೨೦ ಆಯೋಗದ ಸಂಯೋಜಕಿ ಐಡಾ ಡಿಸೋಜಾ, ಸುವರ್ಣ ಮಹೋತ್ಸವ ಸಮಿತಿಯ ಸಂಯೋಜಕ ಸಂದೀಪ್ ಅಂದ್ರಾದೆ, ಪಾಲನಾ ಮಂಡಳಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X