Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಭಕ್ತ ಜನ ಸಾಗರದ ಮಧ್ಯೆ ವೈಭವದ...

ಉಡುಪಿ: ಭಕ್ತ ಜನ ಸಾಗರದ ಮಧ್ಯೆ ವೈಭವದ ವಿಟ್ಲಪಿಂಡಿ ಸಂಪನ್ನ

ವಾರ್ತಾಭಾರತಿವಾರ್ತಾಭಾರತಿ20 Aug 2022 9:13 PM IST
share
ಉಡುಪಿ: ಭಕ್ತ ಜನ ಸಾಗರದ ಮಧ್ಯೆ ವೈಭವದ ವಿಟ್ಲಪಿಂಡಿ ಸಂಪನ್ನ

ಉಡುಪಿ : ಉಡುಪಿ ಶ್ರೀಕೃಷ್ಣ ಮಠದಲ್ಲಿ ಕಳೆದ ಎರಡು ವರ್ಷ ಕೋವಿಡ್‌ನಿಂದಾಗಿ ಸೀಮಿತ ಭಕ್ತರ ಸಮ್ಮುಖದಲ್ಲಿ ನಡೆದ ಶ್ರೀಕೃಷ್ಣನ ಜನ್ಮ ಹಾಗೂ ಬಾಲಲೀಲೆಗಳನ್ನು ನೆನಪಿಸುವ ವಿಟ್ಲಪಿಂಡಿಯು ಈ ಬಾರಿ ಶನಿವಾರ ಭಕ್ತ ಜನ ಸಾಗರದ ಮಧ್ಯೆ ವೈಭವದಿಂದ ಸಂಪನ್ನಗೊಂಡಿತು.

ಅಪರಾಹ್ಣ 3 ಗಂಟೆ ಸುಮಾರಿಗೆ ವಿಟ್ಲಪಿಂಡಿ ಉತ್ಸವ ಆರಂಭಗೊಂಡಿದ್ದು, ಶ್ರೀಕೃಷ್ಣ ಲೀಲೋತ್ಸವದ ವೈಭವದ ಶೋಭಾ ಯಾತ್ರೆಯಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ, ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಪಾಲ್ಗೊಂಡರು.

ಈ ಉತ್ಸವಕ್ಕೆಂದು ವಿಶೇಷವಾಗಿ ತಯಾರಿಸಲಾದ ಮೃಣ್ಮಯಿ(ಮಣ್ಣಿನಲ್ಲಿ ತಯಾರಿಸಿದ ನೀಲಿ ಬಣ್ಣದ ಶ್ರೀಕೃಷ್ಣನ ಮೂರ್ತಿ) ಮೂರ್ತಿಯನ್ನು ಚಿನ್ನದ ರಥದಲ್ಲಿರಿಸಿ ರಥಬೀದಿಯ ಸುತ್ತ ಮೆರವಣಿಗೆ ನಡೆಸಲಾಯಿತು. ಇನ್ನೊಂದು ರಥದಲ್ಲಿ ಅನಂತೇಶ್ವರ ಹಾಗೂ ಚಂದ್ರಮೌಳೀಶ್ವರ ಉತ್ಸವ ಮೂರ್ತಿನ್ನಿರಿಸಿ ಮೆರವಣಿಗೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೃಷ್ಣನ ಬಾಲಲೀಲೆಗಳನ್ನು ನೆನಪಿಸುವ ಸಲುವಾಗಿ ಮಣ್ಣಿನ ಮಡಕೆಯಲ್ಲಿ ಮೊಸರು, ಹಾಲು, ಓಕುಳಿಗಳನ್ನು ತುಂಬಿ ರಥಬೀದಿಯ ಸುತ್ತಲೂ ವಿಶೇಷವಾಗಿ ನಿರ್ಮಿಸಿದ ೧೩ ಗುರ್ಜಿಗಳಿಗೆ ಅವುಗಳನ್ನು ಕಟ್ಟಿ ಯಾದವ ವೇಷ ಧಾರಿಗಳಾದ ಉಡುಪಿಯ ಗೊಲ್ಲರು ಉದ್ದನೆಯ ಕೋಲುಗಳಿಂದ ಮಡಕೆಗಳನ್ನು ಒಡೆಯುವ ಆಟವನ್ನು ಆಡಿದರು.

ರಥಬೀದಿಯ ಅದಮಾರು ಮತ್ತು ಪುತ್ತಿಗೆ ಮಠದ ಮಧ್ಯಭಾಗದಲ್ಲಿ ಹಾಕ ಲಾದ ವೇದಿಕೆಯಲ್ಲಿ ಹುಲಿವೇಷ ಪ್ರದರ್ಶನವನ್ನು ಪರ್ಯಾಯ ಸ್ವಾಮೀಜಿ ಹಾಗೂ ಕಾಣಿಯೂರು ಸ್ವಾಮೀಜಿ ವೀಕ್ಷಿಸಿದರು. ಬಳಿಕ ಸ್ವಾಮೀಜಿಗಳು ಉಂಡೆ, ಚಕ್ಕುಲಿ ಹಾಗೂ ಹಣ್ಣು ಹಂಪಲುಗಳನ್ನು ಭಕ್ತ ಸಮೂಹದ ಮಧ್ಯೆ ಎಸೆದರು. ಸ್ವಾಮೀಜಿ ಎಸೆದ ಪ್ರಸಾದವನ್ನು ಸ್ವೀಕರಿಸಲು ಭಕ್ತರು ಮುಗಿ ಬಿದ್ದರು.  

ಮೆರವಣಿಗೆಯ ಕೊನೆಯಲ್ಲಿ ಚಿನ್ನದ ರಥದಲ್ಲಿರಿಸಿದ ಕೃಷ್ಣನ ಮಣ್ಣಿನ ಮೂರ್ತಿ ಯನ್ನು ಮಧ್ವ ಸರೋವರದಲ್ಲಿ ವಿಸರ್ಜಿಸುವುದರೊಂದಿಗೆ ಈ ಬಾರಿಯ ಕೃಷ್ಣ ಜನ್ಮ್ಟಾಮಿ ವಿಧಿಗಳು ಸಂಪನ್ನಗೊಂಡವು. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಸಾವಿರಾರು ಭಕ್ತರು ಶೃದ್ಧೆ, ಭಕ್ತಿಗಳಿಂದ ವೈವಿಧ್ಯಮಯ ಕಾರ್ಯ ಕ್ರಮಗಳನ್ನು ವೀಕ್ಷಿಸಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ಮೆರವಣಿಗೆಯಲ್ಲಿ ಹುಲಿವೇಷ, ಚಂಡೆ, ತಟ್ಟಿರಾಯ, ವಾದ್ಯ, ಕೃಷ್ಣ ವೇಷ, ರಕ್ಕಸ ವೇಷ, ಗಾಂಧೀಜಿ ವೇಷಗಳು ಕಂಡುಬಂದವು. ರಾಜಾಂಗಣದಲ್ಲಿ ಸಂಜೆ ಹುಲಿವೇಷ, ಜಾನಪದ ಕುಣಿತ ಸ್ಪರ್ಧೆಗಳು ನಡೆದವು. ಮಠದಲ್ಲಿ ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಮಂದಿ ಸರದಿ ಸಾಲಿನಲ್ಲಿ ನಿಂತು ಪ್ರಸಾದ ಸ್ವೀಕರಿಸಿದರು.

ಶೋಭಾಯಾತ್ರೆ ಆರಂಭದಲ್ಲಿ ತಿಳಿ ಮಳೆಯು ಹಬ್ಬದ ಸಂಭ್ರಮಕ್ಕೆ ಯಾವುದೇ ಅಡ್ಡಿಯಾಗಲಿಲ್ಲ. ಸಂಜೆ ವೇಳೆ ಸುರಿದ ಭಾರೀ ಮಳೆಯಿಂದಾಗಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ತುಸು ತೊಂದರೆ ಅನುಭವಿಸಬೇಕಾಯಿತು.

ರಥಬೀದಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ವಿಟ್ಲಪಿಂಡಿಯಲ್ಲಿ ಸಹಸ್ರಾರು ಸಂಖ್ಯೆಯ ಭಕ್ತರು ಭಾಗಿಯಾಗಲಿದ್ದ ಹಿನ್ನೆಲೆ ಯಲ್ಲಿ ರಥಬೀದಿ, ರಾಜಾಂಗಣ ಪಾರ್ಕಿಂಗ್ ಪ್ರದೇಶ ಹಾಗೂ ಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಹಿರಿಯ ಪೊಲೀಸರು ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿ ಭದ್ರತೆ ಯನ್ನು ಪರಿಶೀಲಿಸಿದರು. ಪೊಲೀಸ್ ಇಲಾಖೆಯಿಂದ ಕಿಸೆಗಳ್ಳರ ಬಗ್ಗೆ ಎಚ್ಚರ ವಹಿಸುವ ಕುರಿತು ಬ್ಯಾನರ್‌ಗಳನ್ನು ಅಲ್ಲಲ್ಲಿ ಅಳವಡಿಸಲಾಗಿತ್ತು. ನಗರದ ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಕಂಡುಬಂತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X