ಸೆ.25ರಂದು ಉಡುಪಿ ರಜತ ಮಹೋತ್ಸವ ಉದ್ಘಾಟನೆ
ಫೈಲ್ ಫೋಟೊ
ಉಡುಪಿ, ಸೆ.23: ತಾಲೂಕು ಆಡಳಿತ ಬೈಂದೂರು ಇದರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಉದ್ಘಾಟನಾ ಸಮಾರಂಭ ಸೆ.25 ರಂದು ಬೆಳಗ್ಗೆ 11 ಗಂಟೆಗೆ ನಾಗೂರು ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story