ಉಡುಪಿ: ಗಾಂಜಾ ಸೇವನೆ ಆರೋಪ; 43 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು
ಉಡುಪಿ, ಅ.3: ಮಣಿಪಾಲದಲ್ಲಿ ಮಾದಕ ದ್ರವ್ಯ ಸೇವನೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಗಾಂಜಾ ಸೇವನೆಗೆ ಸಂಬಂಧಿಸಿ ಒಟ್ಟು 43 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೆ.27ರಿಂದ ಅ.1ರವರೆಗೆ ಮಣಿಪಾಲ ಹಾಗೂ ಆಸುಪಾಸಿನ ವಿದ್ಯಾರ್ಥಿಗಳ ಮಾದಕ ದ್ರವ್ಯ ಸೇವನೆ ಬಗ್ಗೆ ಮಣಿಪಾಲ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 150 ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವೆನೆ ಕುರಿತು ಪರೀಕ್ಷೆಗೆ ಒಳಪಡಿಸಲಾಗಿತ್ತು.
ಇವುಗಳಲ್ಲಿ ಅನುಮಾನಾಸ್ಪದವಾಗಿರುವ ಸುಮಾರು 75 ವಿದ್ಯಾರ್ಥಿಗಳ ಮಾದರಿಗಳನ್ನು ಫಾರೆನ್ಸಿಕ್ ವಿಭಾಗಕ್ಕೆ ತಜ್ಞರ ವರದಿಗಾಗಿ ಸಲ್ಲಿಸಲಾಗಿತ್ತು. ಇದರಲ್ಲಿ ಸುಮಾರು 43 ವಿದ್ಯಾರ್ಥಿಗಳ ಮಾದರಿಯಲ್ಲಿ ಪಾಸಿಟಿವ್ ವರದಿ ಬಂದಿದೆ. ಅವರ ವಿರುದ್ಧ ಗಾಂಜಾ ಸೇವನೆಯ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story