ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಹೆಬ್ರಿ, ಅ.6: ಟಿಪ್ಪರ್ ಲಾರಿಯು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ರೊಬ್ಬರು ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ಮಿಯ್ಯಾರು ಬಿಕ್ರಿಜಡ್ಡು ಎಂಬಲ್ಲಿನ ತಿರುವಿನ ಬಳಿ ಅ.5ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಸುದರ್ಶನ್ (28) ಎಂದು ಗುರುತಿಸಲಾಗಿದೆ. ನಂಚಾರು ಕಡೆಯಿಂದ ಮುದ್ದೂರು ಕಡೆಗೆ ಹೋಗುತ್ತಿದ್ದ ಬೈಕಿಗೆ ಎದುರಿನಿಂದ ಮುದ್ದೂರು ಕಡೆಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬಳಿಕ ಲಾರಿಯು ಸವಾರನನ್ನು ಬೈಕ್ ಸಮೇತ ಸುಮಾರು 15 ಅಡಿಯವರೆಗೆ ರಸ್ತೆಯಲ್ಲಿ ಎಳೆದುಕೊಂಡು ಹೋಗಿತ್ತೆಂದು ತಿಳಿದುಬಂದಿದೆ. ಇದರಿಂದ ಗಂಭೀರ ವಾಗಿ ಗಾಯಗೊಂಡ ಸುದರ್ಶನ್ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story