ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ಉಡುಪಿ, ಅ.7: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲು ಅರ್ಹ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಪಿಯುಸಿಯಿಂದ ವೃತ್ತಿಪರ ಕೋರ್ಸ್ಗಳು ಸೇರಿದಂತೆ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕೇಂದ್ರ, ರಾಜ್ಯ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳ ಕ್ರೀಡಾಪಟುಗಳು ಹಾಗೂ ವಿಕಲಚೇತನ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ, ದೂರವಾಣಿ ಸಂಖ್ಯೆ: ೦೮೨೦- ೨೫೨೧೩೨೪ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story