ಉಡುಪಿ: ಅ.11ರಂದು ಮಿನಿ ಉದ್ಯೋಗ ಮೇಳ
ಉಡುಪಿ, ಅ.7: ಆಲ್ಸೆಕ್ ಟೆಕ್ನಾಲಜಿ ಪ್ರೈವೆಟ್ ಲಿ., ರಾಂಡ್ ಸ್ಟಾಂಡ್ ಇಂಡಿಯಾ ಪ್ರೈ.ಲಿ, ಸಂಗೀತಾ ಮೊಬೈಲ್ಸ್, ಪ್ಲಿಫ್ಕಾರ್ಟ್ ಹಾಗೂ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ.ಲಿ ಕಂಪನಿಗಳ ವತಿಯಿಂದ ಅ.11ರಂದು ಬೆಳಗ್ಗೆ 10:30ಕ್ಕೆ ಉಡುಪಿಯ ಅನುರಾಗ ಕಾಂಪ್ಲೆಕ್ಸ್ನ ಶಾಂತ ಎಲೆಕ್ಟ್ರೀಕಲ್ಸ್ ಇಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹು ದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ. ಮೊ.ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story