Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉತ್ತಮ ಉದ್ಯೋಗಕ್ಕಾಗಿ ಸಾಮರ್ಥ್ಯದ ಮೇಲೆ...

ಉತ್ತಮ ಉದ್ಯೋಗಕ್ಕಾಗಿ ಸಾಮರ್ಥ್ಯದ ಮೇಲೆ ನಂಬಿಕೆ ಅಗತ್ಯ: ಜಯಪ್ರಕಾಶ್ ಹೆಗ್ಡೆ

ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ8 Oct 2022 9:11 PM IST
share
ಉತ್ತಮ ಉದ್ಯೋಗಕ್ಕಾಗಿ ಸಾಮರ್ಥ್ಯದ ಮೇಲೆ ನಂಬಿಕೆ ಅಗತ್ಯ: ಜಯಪ್ರಕಾಶ್ ಹೆಗ್ಡೆ

ಉಡುಪಿ, ಅ.8: ಉತ್ತಮ ಉದ್ಯೋಗ ಪಡೆಯಲು ಉತ್ತಮ ಸಂವಹನ ಶಕ್ತಿ, ಕೌಶಲ್ಯ ಮತ್ತು ತನ್ನ ಸಾಮರ್ಥ್ಯದ ಮೇಲೆ ನಂಬಿಕೆ ಇರುವುದು ಅಗತ್ಯ. ಎಲ್ಲ ಸಂದರ್ಭದಲ್ಲಿ ಎಲ್ಲರಿಗೂ ಉದ್ಯೋಗ ಸಿಗದು. ನಿರಾಸೆಗೆ ಜಾರದೆ ಮುನ್ನುಗ್ಗಿದರೆ ಯಶಸ್ಸು ಖಂಡಿತ ದೊರೆಯುತ್ತದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಂಟರ ಸಂಘದ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ ಶನಿವಾರ ನಡೆದ ಎರಡು ದಿನಗಳ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಂಗಳೂರು ಎಂಆರ್‌ಜಿ ಗ್ರೂಪ್ ಚೇರ್ ಮೆನ್ ಕೆ.ಪ್ರಕಾಶ್ ಶೆಟ್ಟಿ ಮಾತನಾಡಿ, ಹಿಂದೆ ಉದ್ಯೋಗವನ್ನು ಅರಸಿಕೊಂಡು ಅಲೆಯುವ ಪರಿಸ್ಥಿತಿ ಇತ್ತು. ಇಂದು ಉದ್ಯೋಗದಾತರೇ ನಿಮ್ಮಲ್ಲಿಗೆ ಬರುವಷ್ಟರ ಮಟ್ಟಿಗೆ ಇಂದಿನ ಯುವ ಜನತೆ ಅದೃಷ್ಟವಂತರಾಗಿದ್ದಾರೆ. ಉದ್ಯೋಗ ಗಳಿಸು ವುದು ಮುಖ್ಯವಲ್ಲ. ಗಳಿಸಿದ ಉದ್ಯೋಗವನ್ನು ಉಳಿಸಿಕೊಂಡು ಬೆಳೆಯುವುದು ಮುಖ್ಯ ಎಂದು ತಿಳಿಸಿದರು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿದರು. ಈ ಸಂದರ್ಭ ದಲ್ಲಿ ಕೆನರಾ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ರಾಮ ನಾಯ್ಕ್ ಮತ್ತು ಸ್ಟೀಲ್ ಸ್ಟ್ರಾಂಗ್ ಮುಂಬಯಿ ಇದರ ಸಿಎಂಡಿ ರಮೇಶ್ ಶೆಟ್ಟಿ ಮತ್ತಿತ್ತರರನ್ನು ಸನ್ಮಾನಿಸ ಲಾಯಿತು. ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಮಟ್ಟಾರ್ ರತ್ನಕರ್ ಹೆಗ್ಡೆ, ಉದ್ಯಮಿಗಳಾದ ಮನೋಹರ್ ಶೆಟ್ಟಿ, ನಿಟ್ಟೆ ಜಸ್ಟಿಸ್ ಕೆ.ಎಸ್ ಹೆಗ್ಡೆ ಇನಸ್ಟಿಟ್ಯೂಟ್ ಆಪ್ ಮೆನೇಜ್‌ಮೆಂಟ್‌ನ ಡೈರೆಕ್ಟರ್ ಪ್ರೋಕೆ ಶಂಕರನ್, ಬೆಲ್-ಒ-ಸೀಲ್ ವಾಲ್ವಸ್‌ನ ಡೈರೆಕ್ಟ್ ಸಪ್ನಾ ಸಾಲಿನ್ಸ್, ಕುಂತಳನಗರ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಕಾರಾಮ್ ಶೆಟ್ಟಿ, ನಿಟ್ಟೆ ಜಸ್ಟಿಸ್ ಕೆ.ಎಸ್ ಹೆಗ್ಡೆ ಇನಸ್ಟಿಟ್ಯೂಟ್ ಆಫ್ ಮೆನೇಜ್ ಮೆಂಟ್‌ನ ಪ್ರೊ.ಸುಧೀರ್ ರಾಜ್, ಉದ್ಯಮಿ ಪ್ರದೀಪ್ ಶೆಟ್ಟಿ, ಗ್ಲೇನ್ ಡಿಸೋಜ ಮುಖ್ಯ ಅತಿಥಿಗಳಾಗಿದ್ದರು.

ಗ್ರಾಮೀಣ ಬಂಟರ ಸಂಘದ ಟ್ರಸ್ಟಿ ಪದ್ಮನಾಭ ಹೆಗ್ಡೆ, ಟ್ರಸ್ಟ್‌ನ ಕೋಶಾಧಿಕಾರಿ ವಿಜಿತ್ ಶೆಟ್ಟಿ, ಸಂಘದ ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಮಾಜಿ ಅಧ್ಯಕ್ಷ ಹೇಮಂತ್ ಶೆಟ್ಟಿ ಉಪಸ್ಥಿತರಿದ್ದರು. ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ರಿಕ್ರೂಟ್‌ಮೆಂಟ್ ಡ್ರೈವ್‌ನ ಚೇರ್‌ಮೆನ್ ಗುರುಪ್ರಶಾಂತ್ ಭಟ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ವಿಜಿತ್ ಶೆಟ್ಟಿ ವಂದಿಸಿದರು. ಪ್ರೊ.ದಿವ್ಯಾರಾಣಿ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.

ಉದ್ಯೋಗ ಮೇಳದಲ್ಲಿ 25ಕ್ಕೂ ಹೆಚ್ಚು ಕಂಪನಿಗಳು ಭಾಗವಹಿವೆ. 1052 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ 700 ಮಹಿಳಾ ಅಭ್ಯರ್ಥಿಗಳು ಭಾಗವಹಿಸಿದ್ದರು. ಪ್ರತಿ ಅಭ್ಯರ್ಥಿಗಳಿಗೆ ಗರಿಷ್ಠ 5 ಕಂಪನಿಗಲ್ಲಿ ಉದ್ಯೋಗಾವಕಾಸ ಕೋರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X