ಲಾರಿ ಢಿಕ್ಕಿ: ಪಾದಚಾರಿ ಮೃತ್ಯು
ಶಂಕರನಾರಾಯಣ, ಅ.11: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅ.10ರಂದು ತಡರಾತ್ರಿ ಸಿದ್ದಾಪುರ ಗ್ರಾಮದ ಹೆನ್ನಾಬೈಲ್ ಮಸೀದಿ ಬಳಿ ನಡೆದಿದೆ.
ಮೃತರನ್ನು ಹೆನ್ನಾಬೈಲ್ ನಿವಾಸಿ ಶಿವಯ್ಯ ನಾಯ್ಕ (60) ಎಂದು ಗುರುತಿಸಲಾಗಿದೆ. ಸಿದ್ದಾಪುರ ಕಡೆಯಿಂದ ಹೊಸಂಗಡಿ ಕಡೆಗೆ ಹೋಗುತ್ತಿದ್ದ ಲಾರಿಯು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಶಿವಯ್ಯ ನಾಯ್ಕಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story