ಬೆಳ್ಳಣ್: ಕಾರು ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಬೆಳ್ಳಣ್: ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಇಂದು ಮಧ್ಯಾಹ್ನ ಬೆಳ್ಮಣ್ ನೀರ್ಚಲ್ ಬಳಿ ನಡೆದಿದೆ.
ಮೃತರನ್ನು ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಎಂದು ಗುರುತಿಸಲಾಗಿದೆ.
ಇವರು ಸಂಬಂಧಿಕರ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಸು ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರೊಂದು ಇವರ ಬೈಕಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದಾಗಿ ರಸ್ತೆಗೆ ಎಸೆಯಲ್ಪಟ್ಟ ಜಾರ್ಜ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story