ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಶಂಕರನಾರಾಯಣ, ಅ.29: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಮಡಾಮಕ್ಕಿ ಮಾಂಡಿ ಮೂರುಕೈ ನಿವಾಸಿ ರಾಜೀವ ಹೆಗ್ಡೆ (66) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.28ರಂದು ರಾತ್ರಿ ಸಿದ್ದಾಪುರ ಮಾರ್ಕೇಟ್ ಒಳಗಡೆ ಕಟ್ಟಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ: ವೈಯಕ್ತಿಕ ವಿಚಾರದಲ್ಲಿ ಮನನೊಂದ ಕೋಟತಟ್ಟು ಪಡುಕೆರೆಮೃತ ಸಂತೋಷ (38) ಎಂಬವರು ಅ.29ರಂದು ಬೆಳಗ್ಗೆ ಮನೆಯ ಬೆಡ್ರೂಮಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ: ಅನಾರೋಗ್ಯದಿಂದ ಮಾನಸಿಕವಾಗಿ ನೊಂದು ಅ.೮ರಂದು ಮನೆಯಲ್ಲಿ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಪೆರಂಪಳ್ಳಿಯ ಜೋಕಿಮ್ ಡಿಸೋಜ(೬೧) ಎಂಬವರು ಅ.೨೮ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story