ತೆಕ್ಕಟ್ಟೆ ಪರಿಸರದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಕುಂದಾಪುರ, ನ.19: ತೆಕ್ಕಟ್ಟೆ ಗ್ರಾಪಂ ವ್ಯಾಪ್ತಿಯ ಮಾಲಾಡಿ ಪರಿಸರದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.
ಶುಕ್ರವಾರ ಸಂಜೆ 7 ಗಂಟೆಯ ವೇಳೆಗೆ ಮಾಲಾಡಿ ಸಮೀಪದಿಂದ ನಾಯಿಯೊಂದನ್ನು ಎಳೆದೊಯ್ಯುವಾಗ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರನಿಗೆ ಚಿರತೆ ಕಾಣಿಸಿಕೊಂಡಿದ್ದು ಬಳಿಕ ಕಾಡು ಪ್ರದೇಶದಲ್ಲಿ ಕಣ್ಮರೆಯಾಗಿದೆ.
ಬಳಿಕ ತಡರಾತ್ರಿ ಮಾಲಾಡಿಯ ತೋಪಿನಿಂದ ಮುಂದೆ ಸಾಗಿದಾಗ ಸಿಗುವ ತೆಕ್ಕಟ್ಟೆ ಗ್ರಾಪಂ ಅಧ್ಯಕ್ಷೆ ಮಮತಾ ದೇವಾಡಿಗರ ಪತಿ ಸುರೇಶ್ ದೇವಾಡಿಗರ ನಿವಾಸದಲ್ಲಿ ನಾಯಿ ಬೊಗಳುವ ಶಬ್ದ ಕೇಳಿಸಿದ್ದು ಮನೆಮಂದಿ ಅಂಗಳದಲ್ಲಿ ಚಿರತೆ ಓಡುವುದನ್ನು ಕಂಡಿದ್ದಾರೆ.
ಈ ಬಗ್ಗೆ ಮನೆಯವರಾದ ಸತೀಶ್ ದೇವಾಡಿಗ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದು ನಿರಂತರ ಈ ಭಾಗದಲ್ಲಿ ಚಿರತೆ ಕಾಟವಿದ್ದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಬೋನಿಟ್ಟು ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
Next Story